Advertisement

ಚಮಚಗಳನ್ನು ದೂರ ಇಟ್ಟು ಕೆಲಸ ಮಾಡಿ : ನೂತನ ಸಿಎಂಗೆ ನಾಗತಿಹಳ್ಳಿ ಸಲಗೆ

02:50 PM Jul 30, 2021 | Team Udayavani |

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ದೇಶಾದ್ಯಂತ ಹಾಗು ರಾಜ್ಯದಲ್ಲಿ ಶುಭಾಶಯಗಳ ಮಹಾಪೂತರವೇ ಹರಿದು ಬರುತ್ತಿದೆ. ಸಿನಿಮಾ ತಾರೆಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ವಿಶ್ ಮಾಡುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಾಹಿತಿ ಮತ್ತು ಸಿನಿಮಾ ನಿರ್ದೇಶದ ನಾಗತಿಹಳ್ಳಿ ಚಂದ್ರಶೇಖರ್ ಟ್ವೀಟ್ ಮೂಲಕ ಶುಭ ಕೋರಿದ್ದು, ಚಮಚಗಳನ್ನು ದೂರ ಇಟ್ಟು ಕೆಲಸ ಮಾಡಿ ಎಂದು ಮನವಿ ಮಾಡಿದ್ದಾರೆ.

Advertisement

ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಚಂದ್ರಶೇಖರ್, ಪ್ರೀತಿಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮನುಷ್ಯ ಪ್ರೀತಿ ; ಸಾಹಿತ್ಯ ಪ್ರೀತಿ ; ಪ್ರಾಣಿ ಪ್ರೀತಿ ಉಳ್ಳ ನೀವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ. ಹೈಕಮಾಂಡ್, ಲೋಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸಮಾಡಿ. ಚಮಚೆಗಳನ್ನು ದೂರವಿಡಿ. ಸಮಾಜದ ಕಟ್ಟ ಕಡೆಯ ಜೀವರ ಬಗ್ಗೆ ಕಾಳಜಿ ಇರಲಿ. ಅಧಿಕಾರವು ಅಲ್ಪಕಾಲೀನ. ಒಳಿತಾಗಲಿ ಎಂದು ಬರೆದಿದ್ದಾರೆ.

ಕಳೆದ ಬುಧವಾರ (ಜು.28) ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಮೋದಿ, ಅಮಿತ್ ಶಾ ಸೇರಿದಂತೆ ಕನ್ನಡದ ಸ್ಟಾರ್ ನಟ ಸುದೀಪ್ ಕೂಡ ಶುಭಾಶಯ ತಿಳಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next