ನವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಕೌಶಲ್ಯಾಭಿವೃದ್ಧಿ ಹಗರಣದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶದ ಹೈಕೋರ್ಟ್ ವಜಾಗೊಳಿಸಿತ್ತು.ಹೀಗಾಗಿ ನಾಯ್ಡುಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
300 ಕೋಟಿ ರೂ. ಅಕ್ರಮದ ಹಿನ್ನೆಲೆಯಲ್ಲಿ ಸೆ.9ರಂದು ನಾಯ್ಡು ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಅವರ ವಿಚಾರಣೆಯನ್ನು ಸಿಐಡಿ ಅಧಿಕಾರಿಗಳು ಶನಿವಾರ ಜೈಲಿನಲ್ಲೇ ವಿಚಾರಣೆ ನಡೆಸಿದ್ದಾರೆ. ನಾಯ್ಡು ಅವರು ಸದ್ಯ ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿದ್ದಾರೆ.
ಸೆ. 25 ರಂದು ಸುಪ್ರೀಂ ಕೋರ್ಟ್‌ನಲ್ಲಿ ನಾಯ್ಡು ಅವರ ಅರ್ಜಿ ವಿಚಾರಣೆ ನಡೆಯಲಿದೆ.