Advertisement

ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ : ನಳೀನ್ ಕುಮಾರ್ ಕಟೀಲ್

05:38 PM May 28, 2021 | Team Udayavani |

ಚಿಕ್ಕಮಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಶುಕ್ರವಾರ ಸಿ.ಟಿ.ರವಿ ಮನೆಗೆ ಭೇಟಿ ನೀಡಿದ್ದಾರೆ.

Advertisement

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಿ. ಟಿ ರವಿ ಮನೆಗೆ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ  ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಇಬ್ಬರು ನಾಯಕರ ಬೇಟಿ ಜನರಲ್ಲಿ ಬಾರೀ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ನೆನಪಿಡಿ… ನಿಮ್ಮ ಬದುಕು ನಿಮ್ಮನ್ನು ಚೆಂದಾಗಿ ಬದುಕಿಸುತ್ತದೆ..!

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಿ ಟಿ ರವಿ ಅವರೊಂದಿಗಿನ ಚರ್ಚೆಯ ನಂತರ ಮಾದ್ಯಮಗಳೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಜನಪ್ರತಿನಿಧಿಗಳಿಗೆ ಒಂದೇ ಕರೆ ಕೊಟ್ಟಿರುವುದು. ಅದು ಕೋವಿಡ್ ನಿರ್ವಹಣೆ. ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಪರಿಶ್ರಮ ಹಾಕಬೇಕಿದೆ ಎಂದಿದ್ದಾರೆ.

ಇನ್ನು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ವಿಚಾರದಲ್ಲಿ  ಉಂಟಾದ ಗೊಂದಲಕ್ಕೆ ಪ್ರತಿಕ್ರಿಯಿಸಿದ ಅವರು, ಯೋಗೇಶ್ವರ್ ಕರೆದು ಏಕೆ ಆ ರೀತಿ ಮಾತನಾಡಿದ್ದೀರಿ ಎಂದು ಮಾಹಿತಿ ಪಡೆಯುತ್ತೇನೆ. ನಾಯಕತ್ವದ ಗೊಂದಲ ಚರ್ಚೆ ಏನೂ ಇಲ್ಲ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಸಿ. ಟಿ. ರವಿ ಅವರಲ್ಲಿ ಯಾವ ವಿಚಾರದ ಬಗ್ಗೆ ಚರ್ಚಿಸಲು ಬಂದಿದ್ದು ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಕಟೀಲ್,  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2ನೇ ಬಾರಿ ಅಧಿಕಾರ ವಹಿಸಿಕೊಂಡು 2 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಕೆಲವೊಂದು ಕಾರ್ಯಕ್ರಮ ಗಳನ್ನು ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಯವರೊಂದಿಗೆ ಚರ್ಚಿಸಲು ಬಂದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : ಮ್ಯಾನ್ಮಾರ್ ನಲ್ಲಿ ಮಿಲಿಟರಿ ದಂಗೆಯ ನಂತರ ಪರಿಸ್ಥಿತಿ ಹೇಗಿದೆ.? WFP ಹೇಳಿದ್ದೇನು..?

Advertisement

Udayavani is now on Telegram. Click here to join our channel and stay updated with the latest news.

Next