Advertisement
ಮಾಧ್ಯಮಗಳೊಂದಿಗೆ ಮಾತಾ ಡಿದ ಅವರು, ಕಳೆದ ವರ್ಷದ ಪ್ರವಾಹಕ್ಕೂ ಕೇಂದ್ರದಿಂದ ಸೂಕ್ತ ಪರಿಹಾರ ಬಂದಿಲ್ಲ. ರಾಜ್ಯದ ಪಾಲಿನ ಜಿಎಸ್‌ಟಿ ಹಣವೂ ಸಿಕ್ಕಿಲ್ಲ. ಅದನ್ನು ಪ್ರಧಾನಿಯಲ್ಲಿ ಕೇಳಲು ರಾಜ್ಯದ ಸಂಸದರನ್ನು ಕರೆದುಕೊಂಡು ಹೋಗಲು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಧೈರ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆ ಮಾಡಿರುವುದು ಕೇವಲ ಕಣ್ಣೊರೆಸುವ ತಂತ್ರ ಎನ್ನುವುದು ಜನರಿಗೆ ಗೊತ್ತಾಗಿದೆ ಎಂದರು.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರಕಾರವಿದ್ದರೆ ಅಭಿವೃದ್ಧಿ ಕಾರ್ಯಗಳಿಗೆ ಅನುಕೂಲವಾಗುತ್ತದೆ ಎಂದು ಭಾಷಣ ಮಾಡಿದ್ದ ಬಿಜೆಪಿ ಸಂಸದರು ನೆರೆಯಿಂದ ತತ್ತರಿಸುತ್ತಿರುವ ರಾಜ್ಯದ ಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ಮುಂದೆ ಒಂದು ಸಲವಾದರೂ ಧ್ವನಿ ಎತ್ತಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಆಗ್ರಹಿಸಿದ್ದಾರೆ.