ಮಂಗಳೂರು: ವೈರಲ್ ಆಗಿರುವ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ. ಈ ಬಗ್ಗೆ ತನಿಖೆಯಾಗಬೇಕು, ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರವಾಗಿ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು.
ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮವಿದ್ದಂತೆ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದರು.
ಇದನ್ನೂ ಓದಿ:ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!
ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿದರು.