Advertisement

ಗಂಜಿಮಠ ದೇವಳಕ್ಕೆ ನಳಿನ್ ಭೇಟಿ

01:28 PM Apr 05, 2019 | keerthan |

ಮಂಗಳೂರು: ಲೋಕಸಭೆ ಚುನಾವಣೆಯ ದಿನಾಂಕ ಸನ್ನಿಹಿತವಾಗುತ್ತಿದ್ದಂತೆ ಅಭ್ಯರ್ಥಿಗಳ ಪ್ರಚಾರವೂ ಭರದಿಂದ ಸಾಗುತ್ತಿದೆ. ಗಂಜಿಮಠ ಶ್ರೀ ಗಣಪತಿ ದೇವಸ್ಥಾನಕ್ಕೆ ಶುಕ್ರವಾರ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಭೇಟಿ ನೀಡಿದರು.

Advertisement

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗಂಜಿಮಠ ಶ್ರೀ ಗಣಪತಿ ದೇವಸ್ಥಾನಕ್ಕೆ ನಳಿನ್ ಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಗೆಲುವಿಗೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಸಂಚಾಲಕ ರಣದೀಪ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ರಾಜೇಶ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಚನ್ ಮಾಣೈ ಸೇರಿದಂತೆ ಆನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next