Advertisement

ನಟ ಜಿ.ಕೆ.ಗೋವಿಂದ ರಾವ್ ನಿಧನಕ್ಕೆ ನಳಿನ್‍ ಕುಮಾರ್ ಸಂತಾಪ

07:39 PM Oct 15, 2021 | Team Udayavani |

ಬೆಂಗಳೂರು: ಹುಬ್ಬಳ್ಳಿಯಲ್ಲಿ ವಾಸವಿದ್ದ ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಇಂಗ್ಲಿಷ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು ಹಲವು ಕೃತಿಗಳನ್ನು ರಚಿಸಿದ್ದರು. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗೆ ಇತ್ತು. ಗೃಹ, ಮಿಥಿಲೆಯ ಸೀತೆಯರು, ಕಫ್ರ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು ಎಂದಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next