Advertisement
ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 3 ವರ್ಷಗಳ ಕಾಲ ಬಿಜೆಪಿ ಆಡಳಿತವಿದ್ದು, ಪಕ್ಷವು ಸಂಘಟನಾತ್ಮಕವಾಗಿ ಬೆಳೆದಿದೆ ಎಂದು ವಿವರಿಸಿದರು.
Related Articles
Advertisement
ಬೂತ್ ಮತ್ತು ಪೇಜ್ ಕಮಿಟಿಗಳನ್ನು ಬಲಪಡಿಸಲಾಗುತ್ತಿದೆ. ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಜೋಡಣೆ ಯಶಸ್ವಿಯಾಗಿದೆ. ವಿಸ್ತಾರಕ್ ಯೋಜನೆಯೂ ಯಶಸ್ಸು ಪಡೆದಿದೆ. ರಾಜ್ಯದಲ್ಲಿ ಶೇ 60ರಷ್ಟು ಪೇಜ್ ಕಮಿಟಿ ಸಂಘಟಿಸಲಾಗಿದೆ ಎಂದರು.
ಕೋವಿಡ್ ವೇಳೆ ಕೈಗೊಂಡ ಕ್ರಮಗಳು, ಲಸಿಕಾಕರಣ, ಉಕ್ರೇನ್ ಸಂದರ್ಭದಲ್ಲಿ 22 ಸಾವಿರ ಭಾರತೀಯರನ್ನು ಮರಳಿ ಕರೆತಂದಿರುವುದು, ಆರ್ಥಿಕ ಚೇತರಿಕೆ ಮನಗಂಡು ಜನರು ಬಿಜೆಪಿಯತ್ತ ಹೆಚ್ಚಿನ ಒಲವು ತೋರುತ್ತಿದ್ದಾರೆ. ರಾಜ್ಯ ಸರಕಾರದ ಸಾಧನೆಯೂ ಅತ್ಯುತ್ತಮವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬಗ್ಗೆ ಆ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ಅಂಥವರ ಪಕ್ಷ ಸೇರ್ಪಡೆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿವರಿಸಿದರು.
14ರಂದು ಅಂಬೇಡ್ಕರ್ ಜಯಂತಿ ಕಾರಣ ಎಲ್ಲರೂ ತಮ್ಮ ಕ್ಷೇತ್ರಗಳಿಗೆ ತೆರಳಲಿದ್ದಾರೆ. ಅಲ್ಲದೆ, 15ರಂದು ಯಾತ್ರೆ ಇರುವುದಿಲ್ಲ. 16- 17ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಇರುವ ಕಾರಣ ಯಾತ್ರೆ ಇರುವುದಿಲ್ಲ. 18ರ ಬಳಿಕ 24ರವರೆಗೆ ಯಾತ್ರೆ ಮುಂದುವರಿಯಲಿದೆ. 3 ತಂಡಗಳಲ್ಲಿ 10 ವಿಭಾಗಗಳು, ಎಲ್ಲ ಜಿಲ್ಲೆಗಳಿಗೆ ತಂಡಗಳು ತೆರಳಲಿವೆ ಎಂದು ನುಡಿದರು.ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯದ ಸಚಿವರಾದ ಕೆ.ಎಸ್. ಈಶ್ವರಪ್ಪ, ವಿ. ಸೋಮಣ್ಣ, ಕೆ.ಸಿ. ನಾರಾಯಣಗೌಡ, ಕೆ. ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷರು ಮತ್ತು ಸಂಸದರಾದ ಪ್ರತಾಪ್‍ಸಿಂಹ, ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ರಾಜ್ಯ ಕಾರ್ಯದರ್ಶಿಗಳಾದ ತುಳಸಿ ಮುನಿರಾಜುಗೌಡ, ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ. ಮಹೇಶ್, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೈಸೂರು ಜಿಲ್ಲಾ ಅಧ್ಯಕ್ಷರಾದ ಮಂಗಳಾ ಸೋಮಶೇಖರ್ ಅವರು ಉಪಸ್ಥಿತರಿದ್ದರು.