Advertisement
ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಸಿದ್ದರಾಮಯ್ಯ ಅವರ ಆರೋಪಕ್ಕೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನಿಮಗಿರುವ ಸಂಶಯಗಳ ಬಗ್ಗೆ ಎಲ್ಲ ಮಾಹಿತಿ ನೀಡಿ, ನಾವು ಉತ್ತರ ಕೊಡುತ್ತೇವೆ ಎಂದು ತಿಳಿಸಿರುವುದಾಗಿ ಹೇಳಿದರು.
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿನ ಇಂದಿರಾ ಕ್ಯಾಂಟಿನ್‌ಗಳಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಅವರ ಮೇಲಿನ ಆರೋಪಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ. ಇದೀಗ ಬಿಜೆಪಿ ಸರಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಳಿನ್ ಟೀಕಿಸಿದರು.