Advertisement

ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ : ಕಟೀಲ್

06:15 PM Sep 05, 2020 | sudhir |

ಬೆಂಗಳೂರು : ರಾಜ್ಯದಲ್ಲಿ ಡ್ರಗ್ ಮಾಫಿಯಾವನ್ನು ಬೇರು ಸಹಿತ ಕಿತ್ತು ಒಗೆಯುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಕಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೆಯನ್ನು ಹಂಚಿಕೊಂಡಿದ್ದು ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೆ ಇಲ್ಲ ಎಂದಿದ್ದಾರೆ.

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next