Advertisement

ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ

12:22 PM Aug 22, 2021 | Team Udayavani |

ಬೆಂಗಳೂರು: ಬಿಜೆಪಿ ಹಿರಿಯ ನಾಯಕರು, ಅಯೋಧ್ಯೆಯ ಶ್ರೀರಾಮ ಮಂದಿರದ ಜನಾಂದೋಲನದ ಮುಂಚೂಣಿ ನಾಯಕರು ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಮತ್ತು ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆದ ಕಲ್ಯಾಣ್ ಸಿಂಗ್ ಅವರ ನಿಧನದಿಂದ ಪಕ್ಷವು ಒಬ್ಬ ಹಿರಿಯ ಮಾರ್ಗದರ್ಶಕರನ್ನು ಕಳೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನಳಿನ್‍ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next