Advertisement

ನಕಲಿ ಆಡಿಯೋ ಸೃಷ್ಟಿಸಿ ಪಕ್ಷಕ್ಕೆ ಕಳಂಕ ತರುವ ಕೆಲಸ ; ಸೂಕ್ತ ತನಿಖೆಗೆ ಕಟೀಲ್ ಮನವಿ

12:02 AM Jul 19, 2021 | Team Udayavani |

ಬೆಂಗಳೂರು: “ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

Advertisement

ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಟೋಕಿಯೊ ಒಲಿಂಪಿಕ್ಸ್‌: ಕೊಡಗಿನ ಅಂಕಿತಾ ವನಿತಾ ಹಾಕಿ ಕೋಚ್‌

Advertisement

Udayavani is now on Telegram. Click here to join our channel and stay updated with the latest news.

Next