Advertisement

ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ: ಸಂಸದ ನಳೀನ್ ಕುಮಾರ್ ಕಟೀಲ್

01:04 PM Aug 21, 2021 | Team Udayavani |

ಕಲಬುರಗಿ: ಕೆಲವೇ ದಿನಗಳಲ್ಲಿ ಉಳಿದಿರುವ ನಾಲ್ಕು ಸಚಿವ ಸ್ಥಾನಗಳ ಭರ್ತಿ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

Advertisement

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ನಗರಕ್ಕಾಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳಿದಿರುವ ನಾಲ್ಕು ಸ್ಥಾನಗಳನ್ನು ಪ್ರಾದೇಶಿಕತೆಯ, ಪ್ರವರ್ಗ ಅವಲೋಕಿಸಿ ಅವಕಾಶ ಕಲ್ಪಿಸಲಾಗುತ್ತದೆ. ನಾಲ್ಕು ಸಚಿವ ಸ್ಥಾನಗಳಲ್ಲಿ ಒಂದು ಸ್ಥಾನ ಕಲಬುರಗಿಗೆ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲವನ್ನು ಅಳೆದು ತೂಗಿ ಕೆಲ ಇತಿ ಮಿತಿಗಳೊಂದಿಗೆ ಸ್ಥಾನಗಳನ್ನು ಕಲ್ಪಿಸಲಾಗಿದೆ. ಆದರೂ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಏನೇಯಾದರೂ ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆ ಗೊಳ್ಳಲಿದೆ ಎಂದರು.

ಇದನ್ನೂ ಓದಿ :ಕಾಂಗ್ರೆಸ್ ಪಕ್ಷದಲ್ಲೇ ಭ್ರಷ್ಟಾಚಾರ ಹೆಮ್ಮರವಾಗಿ ಬೆಳೆದಿದೆ : ಛಲವಾದಿ ನಾರಾಯಣಸ್ವಾಮಿ

ಮೂರು ಪಾಲಿಕೆ ಬಿಜೆಪಿ ವಶ:  ಈಗ ನಡೆಯುತ್ತಿರುವ ಕಲಬುರಗಿ, ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಪಕ್ಷದ ಉಸ್ತುವಾರಿ ಹಾಗೂ ಕೋರ್ ಕಮಿಟಿ ಸದಸ್ಯರು ಸಭೆ ನಡೆಸಿ ಸ್ಪರ್ಧಾ ಅಭ್ಯರ್ಥಿಗಳ ಪಟ್ಟಿ ಅಂತೀಮಗೊಳಿಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಅವಲೋಕಿಸಿ ಹಿಂದಿನ ಚುನಾವಣೆಗಳಂತೆ ಪಾಲಿಕೆ ಚುನಾವಣೆ ಯಲ್ಲೂ ಜನಾಶೀರ್ವಾದ ಮಾಡಲಿದ್ದಾರೆ ಎಂದು ಕಟೀಲ್ ಹೇಳಿದರು.

Advertisement

ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿದ್ದಾಗ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿದ್ದರಿಂದ ಹೆದ್ದಾರಿಗಳಲ್ಲಿ ಅಲ್ಲಲ್ಲಿ ಹಾಕಲಾಗಿದ್ದ ವಾಜಪೇಯಿ ಅವರ ಭಾವಚಿತ್ರ ತದನಂತರ ಬಂದ ಯುಪಿಎ ಸರ್ಕಾರ ಕಿತ್ತು ಹಾಕಿತು. ಅಷ್ಟೇ ಏಕೆ ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಆರಂಭಿಸಲಾಗಿದ್ದ ಅಟಲ್ ಸಾರಿಗೆ ಬಸ್ ಸಂಚಾರ ವ್ಯವಸ್ಥೆಯನ್ನು ತದನಂತರ ಸಿದ್ದರಾಮಯ್ಯ ಸರ್ಕಾರ ಬಸ್ ಸಂಚಾರ ವ್ಯವಸ್ಥೆ ಬಂದ್ ಮಾಡಿತು.‌ ಆದರೆ ಬಿಜೆಪಿ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಲಿಲ್ಲ. ಈಗಲೂ ಇಂದಿರಾ ಕ್ಯಾಂಟಿನ್ ಬಂದ್ ಮಾಡೋದಿಲ್ಲ.‌ ಆದರೆ ಹೆಸರು ಬದಲಾವಣೆ ಚರ್ಚೆಗಳು ನಡೆಯುತ್ತಿವೆ ಎಂದು ಸಂಸದ ಕಟೀಲ್ ಹೇಳಿದರು.

ಸಂಸದ ಡಾ. ಉಮೇಶ ಜಾಧವ್, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್, ಸುಭಾಷ್ ಗುತ್ತೇದಾರ, ಬಸವರಾಜ ಮತ್ತಿಮಡು, ಶಶೀಲ್ ನಮೋಶಿ, ಸುನೀಲ್ ವಲ್ಲಾಪುರೆ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ನಗರಾಧ್ಯಕ್ಷ ಸಿದ್ದಾಜೀ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next