ಮಂಗಳೂರು: ರಾಜಕೀಯ ಕ್ಷೇತ್ರದಲ್ಲಿ, ರಾಜಕಾರಣ ಇರಬೇಕು, ವೈಯಕ್ತಿಕ ವಿಚಾರಗಳಲ್ಲ. ರಾಜಕೀಯದಲ್ಲಿ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತಾನಾಡಲ್ಲ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಕಾರ್ಯಕರ್ತನಿಗೆ ಡಿ.ಕೆ ಶಿವಕುಮಾರ್ ಕಪಾಳಮೋಕ್ಷ ಮಾಡಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಏನೇ ಮಾತಾಡಿದ್ರೂ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ಮತ್ತು ಜನರು ನಮ್ಮತ್ರ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನು ಪಡುತ್ತಾರೆ. ಯಾರೇ ರಾಜಕಾರಣಿ ಆದ್ರೂ ಎಲ್ಲೇ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ.ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ ಎಂದು ಕಿಡಿಕಾಡಿದರು.
ಇದನ್ನೂ ಓದಿ: ದ್ವಿತೀಯ ಪಂದ್ಯದಲ್ಲೂ ಗೆದ್ದ ವೆಸ್ಟ್ ಇಂಡೀಸ್: ಸರಣಿ ಸೋಲಿನ ಆತಂಕದಲ್ಲಿ ಆಸ್ಟ್ರೇಲಿಯಾ
ಕಾಂಗ್ರೆಸ್ಸಿಗರ ಈ ವರ್ತನೆ ಇದೇ ಮೊದಲಲ್ಲ. ಈ ಹಿಂದೆ ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಯುದ್ದಕ್ಕೆ ಕರೆದು ಒಳಹೊಕ್ಕಿದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಅವರೇ ಎಂದು ಕಟೀಲ್ ಕಿಡಿಕಾರಿದ್ದಾರೆ.