Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ನಮ್ಮ ಸರ್ಕಾರ, ಸರ್ವ ಸಮಾಜಗಳ ಬಗ್ಗೆ ಗೌರವ ಕೊಡುತ್ತಿದೆ ಎಂಬ ಭಾವನೆ ಜನರಲ್ಲಿದೆ. ಅಲ್ಲದೇ ಬಿಜೆಪಿ ಸರ್ಕಾರದ ಯೋಜನೆಗಳು ಜನರನ್ನು ತಲುಪುತ್ತಿವೆ. ಅದು ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಬಹಿರಂಗ ಕೂಡ ಆಗಿದೆ. ಇನ್ನು ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವವಿದೆ. ಅವರ ನೇತೃತ್ವ ಬೇಕು. ಅವರ ಮಾರ್ಗದರ್ಶನದಲ್ಲಿ ಬೊಮ್ಮಾಯಿ ಸರ್ಕಾರ ಇರಬೇಕು ಎಂಬ ಭಾವನೆ ಇದೆ ಎಂದರು.
Related Articles
ಸಿದ್ದರಾಮಯ್ಯ ತಮ್ಮ ರಾಜಕೀಯ ಗುರು ದೇವೇಗೌಡರನ್ನೇ ತುಳಿದು ಜೆಡಿಎಸ್‌ನಿಂದ ಹೊರ ಬಂದರು. ಇಂದಿರಾ ಗಾಂಧಿಯನ್ನು ಕೆಟ್ಟ ಶಬ್ದಗಳಿಂದ ಬೈದವರು. ಅದೇ ಸೋನಿಯಾ ಗಾಂಧಿ ಕಾಲು ಹಿಡಿದು, ಭಿಕ್ಷೆ ಬೇಡಿ ಮುಖ್ಯಮಂತ್ರಿಯಾದರು. 2ನೇ ಬಾರಿ ಮುಖ್ಯಮಂತ್ರಿಯಾಗಲು ಹೋದರು. ಜನ ಅವರನ್ನು ಒಪ್ಪಲಿಲ್ಲ. ಯಡಿಯೂರಪ್ಪ ಸಿಎಂ ಆಗಬಾರದೆಂದು ತಮ್ಮ ವೈರಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದರು. ಒಂದೇ ವರ್ಷದಲ್ಲಿ ಕುಮಾರಸ್ವಾಮಿಗೆ ದ್ರೋಹ ಮಾಡಿದರು. ಸಿದ್ದರಾಮಯ್ಯ ಒಬ್ಬ ರಾಜಕೀಯ ಖಳನಾಯಕ ಎಂದರು.
Advertisement
ಎಲ್ಲರಿಗೂ ದ್ರೋಹ ಮಾಡಿದರೆ ಸಿದ್ದರಾಮಯ್ಯ ಅವರ ಪರಿಸ್ಥಿತಿ ಮುಂದೆ ಏನಾಗುತ್ತದೆ ನೋಡಿ. ಈಗ ಕ್ಷೇತ್ರ ಹುಡುಕುವ ಪರಿಸ್ಥಿತಿ ಬಂದಿದೆ. ಕ್ಷೇತ್ರವಿಲ್ಲ, ಜನ ಬೆಂಬಲವೂ ಇಲ್ಲ. ದ್ರೋಹ ಮಾಡಿದ್ದಕ್ಕೆ ದೇವರೂ ಕೈಬಿಟ್ಟಿದ್ದಾನೆ. ಕಾಂಗ್ರೆಸ್‌ನಲ್ಲಿ ಹಲವು ಗೊಂದಲಗಳಿವೆ. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯ ಎಂಬ ಎರಡು ಗುಂಪುಗಳಿವೆ. 3ನೇ ಗುಂಪು ಪ್ರಭಾವಶಾಲಿಯಾಗಿದೆ. ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ ಅವರನ್ನು ಸೋಲಿಸಿದ್ದರು. ಅವರಿಬ್ಬರನ್ನು ಸೋಲಿಸಿ ಮುಖ್ಯಮಂತ್ರಿ ಆಗಬೇಕೆಂದರೆ ಜನ ಆಶೀರ್ವಾದ ಮಾಡಲಿಲ್ಲ ಎಂದರು.