Advertisement

ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್‍ಗಳಲ್ಲಿ ಬಿಜೆಪಿ ಚಾರಿತ್ರಿಕ ಗೆಲುವು: ನಳಿನ್‍ ಕಟೀಲ್

04:05 PM Jul 04, 2021 | Team Udayavani |

ಬೆಂಗಳೂರು: ಉತ್ತರ ಪ್ರದೇಶದ ಜಿಲ್ಲಾ ಪಂಚಾಯತ್‍ಗಳಲ್ಲಿ ಬಿಜೆಪಿ ಅತ್ಯದ್ಭುತ ಸಾಧನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ನಳಿನ್‍ಕುಮಾರ್ ಕಟೀಲ್ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ. ಇದು 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement

ಇದನ್ನೂ ಓದಿ:ರಾಜ್ಯದಲ್ಲಿ ಪಂಚ ಕೌರವರು ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ: ಸಚಿವ ಈಶ್ವರಪ್ಪ

ಜನಪರ ಕೆಲಸಗಳು ಮತ್ತು ಕೋವಿಡ್‍ನ ಅತ್ಯಂತ ಸಮರ್ಥ ನಿರ್ವಹಣೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚಿರುವುದಕ್ಕೆ ಇದು ಸಾಕ್ಷಿಯಂತಿದೆ ಎಂದು ಅವರು ತಿಳಿಸಿದ್ದಾರೆ.

ಒಟ್ಟು 75 ಜಿಲ್ಲಾ ಪಂಚಾಯತ್‍ಗಳ ಅಧ್ಯಕ್ಷ ಸ್ಥಾನದ ಪೈಕಿ 67ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದೊಂದು ಚಾರಿತ್ರಿಕ ಗೆಲುವು ಎಂದು ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next