Advertisement

ಉಪಚುನಾವಣೆ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಔಟ್‌: ಕಟೀಲ್‌

08:02 PM Apr 11, 2021 | Team Udayavani |

ಬೆಳಗಾವಿ: ಕಾಂಗ್ರೆಸ್‌ನ ಒಳಜಗಳ ಬೀದಿಗೆ ಬಿದ್ದಿದ್ದು, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನಿಂದ ಹೊರಹಾಕಲು ಡಿ.ಕೆ. ಶಿವಕುಮಾರ್ ಸೇರಿ ಅನೇಕ ಮುಖಂಡರು ಒಂದಾಗಿದ್ದಾರೆ. ಉಪ ಚುನಾವಣೆ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಹೊರ ಬರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಉಪಚುನಾವಣೆ ಬಳಿಕ ಕಾಂಗ್ರೆಸ್‌ನಲ್ಲಿ ಇರುವುದಿಲ್ಲ. ಸಿದ್ದರಾಮಯ್ಯ-ಡಿಕೆಶಿ ಮಧ್ಯೆ ಕಾಳಗ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಹೊರದಬ್ಬಲು ಡಿ.ಕೆ. ಶಿವಕುಮಾರ್ ಸೇರಿ ಕೆಲವು ಮುಖಂಡರು ಒಂದಾಗಿದ್ದಾರೆ. ಮುಂದಿನ ಸಿಎಂ ನಾನೇ ಆಗುವುದಾಗಿ ಅಹಂಕಾರದ ಮಾತುಗಳನ್ನು ಹೇಳುತ್ತಿರುವ ಸಿದ್ದರಾಮಯ್ಯ ಅವರ ಕಾಲೆಳೆಯಲು ತಂಡ ರೆಡಿ ಆಗಿದೆ. ಹೇಗಾದರೂ ಮಾಡಿ ಕಾಂಗ್ರೆಸ್‌ನಿಂದ ಹೊರ ಹಾಕಬೇಕೆಂಬ ಯೋಚನೆ ಡಿ.ಕೆ. ಶಿವಕುಮಾರ್ ನಡೆಸಿದ್ದಾರೆ. ಡಿಕೆಶಿ ಅಧ್ಯಕ್ಷರಾಗಿದ್ದಾಗ ಯಾವುದೇ ಉಪ ಚುನಾವಣೆಯನ್ನು ಕಾಂಗ್ರೆಸ್‌ ಗೆಲ್ಲಬಾರದು ಎಂದು ಸಿದ್ದರಾಮಯ್ಯ ನೋಡಿಕೊಳ್ಳುತ್ತಿದ್ದಾರೆ ಎಂದರು.

ಇದನ್ನೂ ಓದಿ :ರಾಜ್ಯದಲ್ಲಿಂದು ಕೋವಿಡ್ ಸ್ಫೋಟ : ಒಂದೇ ದಿನ 10,250 ಪಾಸಿಟಿವ್ ಪ್ರಕರಣ ಪತ್ತೆ

ಈಗಾಗಲೇ ಯತ್ನಾಳ್ ಗೆ ಮೂರು ಬಾರಿ ನೋಟಿಸ್‌ ನೀಡಲಾಗಿದೆ. ಪಕ್ಷ ಕ್ರಮ ಕೈಗೊಳ್ಳುತ್ತದೆ. ಶಾಸಕರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೆಲ ನಿಯಮ ಅನುಸರಿಸಬೇಕಾಗುತ್ತದೆ. ಯತ್ನಾಳ್ ಅವರಿಗೆ ನೋಟಿಸ್‌ ಯಾವುದು, ಲವ್‌ ಲೆಟರ್‌ ಯಾವುದು ಎನ್ನುವುದು ಗೊತ್ತಿಲ್ಲದಿದ್ದರೆ ಏನು ಮಾಡುವುದು ಎಂದು ಪ್ರಶ್ನಿಸಿದರು.

ಅನುಭವಿ ಅಭ್ಯರ್ಥಿ ಮಂಗಲಾ ಅಂಗಡಿ
ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮಂಗಲಾ ಅಂಗಡಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಅತಿ ಹೆಚ್ಚು ಅನುಭವಿಗಳಾಗಿದ್ದಾರೆ. ಸಿದ್ದರಾಮಯ್ಯ ಹೆಣ್ಣು ಮಕ್ಕಳ ಬಗ್ಗೆ ಅಗೌರವ ತೋರಿ ಅವಮಾನ ಮಾಡಿದ್ದಾರೆ. ಬಿಜೆಪಿ ಚುನಾವಣೆ ಎದುರಿಸಲು ಸಿದ್ಧವಾಗಿದೆ. ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ, ಅಸಮಾಧಾನ ಇಲ್ಲ. ಎಲ್ಲರೂ ಸೇರಿ ಅಖಾಡದಲ್ಲಿ ದುಡಿಯುತ್ತಿದ್ದೇವೆ ಎಂದು ಕಟೀಲ್‌ ಹೇಳಿದರು.

Advertisement

ಕಾಂಗ್ರೆಸ್‌ ಸರ್ಕಸ್‌ ಕಂಪನಿ
ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಪರಮೇಶ್ವರ ಅವರದ್ದು ಒಂದೊಂದು ಗ್ಯಾಂಗ್‌ ಆಗಿದೆ. ಕಾಂಗ್ರೆಸ್‌ ಪಕ್ಷ ಸರ್ಕಸ್‌ ಕಂಪನಿ ಆಗಿದೆ. ಈ ಸರ್ಕಸ್‌ ಕಂಪನಿ ಸರಿಪಡಿಸಲು ರಣದೀಪ ಸಿಂಗ್‌ ಸುರ್ಜೆವಾಲಾ ಅವರನ್ನು ಸೋನಿಯಾ  ಗಾಂಧಿ ಅವರು ಕರ್ನಾಟಕಕ್ಕೆ ಕಳುಹಿಸಿದ್ದಾರೆ. ಇವರ ಸಂಧಾನ ನಡೆಸಲು ಇಲ್ಲಿಗೆ ಬಂದಿದ್ದಾರೆ ಎಂದು ಕಟೀಲ್‌ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next