Advertisement

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ದೃಢ

04:46 PM Aug 30, 2020 | keerthan |

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ನಳಿನ್ ಕಟೀಲ್ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟಪಡಿಸಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗಷ್ಟೇ  ಒಂದು ವರ್ಷ ಪೂರ್ತಿಗೊಳಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next