Advertisement

ಶಾರದಾ ಆಚಾರ್ಯರ ನಿಧನಕ್ಕೆ ನಳಿನ್‍ ಕುಮಾರ್ ಕಟೀಲ್ ಸಂತಾಪ

08:14 PM Feb 06, 2021 | Team Udayavani |

ಬೆಂಗಳೂರು: ಜನಸಂಘದ ಹಿರಿಯ ಧುರೀಣರಾದ ಶ್ರೀಮತಿ ಶಾರದಾ ಆಚಾರ್ಯ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಜನಸಂಘದ ಕರ್ನಾಟಕ ಪ್ರಾಂತದ ಉಪಾಧ್ಯಕ್ಷರಾಗಿದ್ದ ಅವರು, ಮಂಗಳೂರು ನಗರಸಭೆಯ ಉಪಾಧ್ಯಕ್ಷೆಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆವಾಸ ಅನುಭವಿಸಿದ್ದರು. ಶಾರದಾ ಆಚಾರ್ಯ ಅವರ ಕುಟುಂಬ ಮತ್ತು ಬಂಧುವರ್ಗಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ:ಪಂಚಮಸಾಲಿ ಸಮಾಜ 2ಎ ಸೇರ್ಪಡೆಗೆ ಆಗ್ರಹಿಸಿ ಮನವಿ

Advertisement

Udayavani is now on Telegram. Click here to join our channel and stay updated with the latest news.

Next