Advertisement

ರೈತರ ಹೆಸರಿನಲ್ಲಿ ಗೂಂಡಾಗಿರಿ: ನಳಿನ್‍ಕುಮಾರ್ ಕಟೀಲ್ ಖಂಡನೆ

09:21 PM Jan 26, 2021 | Team Udayavani |

ಬೆಂಗಳೂರು: ಜನವರಿ 26 ನಮ್ಮೆಲ್ಲ ದೇಶವಾಸಿಗಳಿಗೆ ಅತ್ಯಂತ ಪವಿತ್ರವಾದ ದಿನ. ಈ ದಿನದಂದು ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಸಂವಿಧಾನದ ಆಶಯವನ್ನು ಅಗೌರವಿಸಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ದೇಶವಿರೋಧಿ ಶಕ್ತಿಗಳಾದ ಖಲಿಸ್ತಾನ್ ಧ್ವಜವನ್ನು ಹಾರಿಸಿರುವುದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

Advertisement

ಭಾರತೀಯ ಜನತಾ ಪಾರ್ಟಿ ಈ ಗೂಂಡಾಗಿರಿ ಪ್ರವೃತ್ತಿಯನ್ನು, ವ್ಯವಸ್ಥೆಯ ಮೇಲೆ ಮಾಡಿರುವ ಹಲ್ಲೆಯನ್ನು, ಪೊಲೀಸರ ಮೇಲೆ ನಡೆಸಿರುವ ದೌರ್ಜನ್ಯವನ್ನು ಹಾಗೂ ಸಂವಿಧಾನವನ್ನು ಧಿಕ್ಕರಿಸುವ ದೇಶವಿರೋಧಿ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತದೆ.

ರೈತರ ಹೆಸರಿನಲ್ಲಿ ರೈತರ ಪರವಾಗಿರುವ ಮಸೂದೆಗಳನ್ನು ಪ್ರತಿಭಟಿಸುತ್ತಿರುವ ನೆಪದಲ್ಲಿ ಒಂಬತ್ತು ಸುತ್ತಿನ ಮಾತುಕತೆಯ ನಂತರವೂ ತಮ್ಮ ಪಟ್ಟನ್ನು ಬಿಡದೆ ರಾಷ್ಟ್ರವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸಿ ಕಾಂಗ್ರೆಸ್ ಪಕ್ಷ, ಕಮ್ಯೂನಿಸ್ಟ್ ಪಕ್ಷ, ರೈತ ವಿರೋಧಿ ದಲ್ಲಾಳಿಗಳು, ಖಲಿಸ್ತಾನ್ ಮತ್ತು ಟುಕಡೇ ಟುಕಡೇ ಗ್ಯಾಂಗ್‍ನಂಥ ರಾಷ್ಟ್ರವಿರೋಧಿ ಶಕ್ತಿಗಳು ಸಂಘಟಿತರಾಗಿ ನಡೆಸುತ್ತಿರುವ ಹೋರಾಟ ಅತ್ಯಂತ ಖಂಡನೀಯ ಮತ್ತು ಅನವಶ್ಯಕ ಎಂದು ಹೇಳಿದರು.

ಇದನ್ನೂ ಓದಿ:  ರೈತರು ಕಾನೂನು ಬಾಹೀರವಾಗಿ ನಡೆದುಕೊಂಡಿರುವುದು “ಅತ್ಯಂತ ದುರದೃಷ್ಟಕರ”: ಶಶಿ ತರೂರ್

ಭಾರತೀಯ ಜನತಾ ಪಾರ್ಟಿ ಯಾವತ್ತೂ ರೈತರ ಪರವಾಗಿದ್ದು, ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಮತ್ತು ರೈತರನ್ನು ದಲ್ಲಾಳಿಗಳ ಕಪಿಮುಷ್ಟಿಯಿಂದ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸುವಲ್ಲಿ ತನ್ನನ್ನು ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಈ ಮಸೂದೆಗಳನ್ನು ತಂದಿರುವುದನ್ನು ದೇಶ ಒಪ್ಪಿಕೊಂಡಿದೆ.

Advertisement

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುಂದಾಗಿದ್ದ ಪೊಲೀಸರು ಅತ್ಯಂತ ಸಂಯಮದಿಂದ ವರ್ತಿಸಿದ್ದು, ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲೆಸೆತ, ಮಾರಕಾಯುಧ ಪ್ರಯೋಗ ಮಾಡಿರುವುದು ಹಾಗೂ ಕಬ್ಬಿಣದ ಸರಳಿನಿಂದ ಹಲ್ಲೆ ಮಾಡಿರುವುದು ಗೂಂಡಾ ಪ್ರವೃತ್ತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದೂ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ:  ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆ ನಿಯೋಜನೆ, ಉನ್ನತ ಮಟ್ಟದ ಸಭೆ; ಇಂಟರ್ನೆಟ್ ಸ್ಥಗಿತ

Advertisement

Udayavani is now on Telegram. Click here to join our channel and stay updated with the latest news.

Next