ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಂಪೂರ್ಣ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.
ಇಂದು ಮುಖ್ಯಮಂತ್ರಿಗಳ ಜೊತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲಾಕ್ ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಂಪೂರ್ಣ ಜಿಲ್ಲೆಯನ್ನು ಲಾಕ್ ಡೌನ್ ಮಾಡಬೇಕು ಎಂದು ಜಿಲ್ಲಾಡಳಿತ ಸಿಎಂ ಗೆ ಮನವಿ ಮಾಡಿದ್ದಾರೆ.ಇದಕ್ಕೆ ಪ್ರತಿಕ್ರಯಿಸಿದ ಸಿಎಂ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದು, ಸಿಎಂ ಸಭೆಯ ನಂತರ ಜಿಲ್ಲೆಯನ್ನು ಲಾಕ್ ಡೌನ್ ಮಾಡುವ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ.
ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡುವುದು ಬೇಡ. ಆದರೆ ಜಿಲ್ಲೆಯ ಗಡಿಭಾಗಗಳನ್ನು ಮುಚ್ಚಿ. ಜಿಲ್ಲೆಗೆ ಬೇರೆ ಕಡೆಯಿಂದ ಬರುವುದನ್ನು ತಡೆಯವಂತೆ ಜಿಲ್ಲಾಧಿಕಾರಿಗಳು ಸಿಎಂ ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.