Advertisement
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಪುರಭವನದಲ್ಲಿ ಶನಿವಾರ ಆಯೋಜಿಸಿದ “ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ರಾಜ್ಯದ 75 ಸ್ಥಳಗಳಲ್ಲಿ ತಾಯಿ ಭಾರತಿಗೆ ಕನ್ನಡದ ಬಂಧುಗಳಿಂದ ವಿಶೇಷ ಆರತಿಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೂರ್ವಜರು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ, ತ್ಯಾಗವನ್ನು ಯುವ ಪೀಳಿಗೆ ಅರಿಯಬೇಕು ಎಂದರು. ಮೇಯರ್ ಪ್ರೇಮಾನಂದ ಶೆಟ್ಟಿ, ಇದೊಂದು ಅರ್ಥಗರ್ಭಿತ ಕಾರ್ಯಕ್ರಮ ಎಂದರು.
Advertisement
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಜಗದೀಶ್ ಪೈ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಉಪನ್ಯಾಸಕರಾಗಿ ಆಗಮಿಸಿದ್ದ ಪ್ರಾಧ್ಯಾಪಕ ಕೇಶವ ಬಂಗೇರ ವೇದಿಕೆಯಲ್ಲಿದ್ದರು.
ವರ್ಣರಂಜಿತ ಮೆರವಣಿಗೆಕಾರ್ಯಕ್ರಮಕ್ಕೂ ಮುನ್ನ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವರ್ಣರಂಜಿತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳು, ಸ್ತ್ರೀಶಕ್ತಿ ಸಂಘಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು – ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ಚೆಂಡೆ, ಕಲ್ಲಡ್ಕ ಗೊಂಬೆ, ಸ್ಯಾಕೊÕàಫೋನ್, ಡೊಳ್ಳು ಕುಣಿತ, ಕೊರಗರ ಡೊಳ್ಳು, ಕೊಂಕಣಿ ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಲಾ ಪ್ರಕಾರಗಳಿದ್ದವು.