Advertisement

Mangaluru: ಜನರ ಭಾವನೆಗಳಿಗೆ ವಿರುದ್ಧವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ: ಕಟೀಲ್

05:24 PM Jun 27, 2023 | Team Udayavani |

ಮಂಗಳೂರು: ಜನರ ಭಾವನೆಗಳಿಗೆ ವಿರುದ್ಧವಾಗಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಹೀಗೆ ಆದಲ್ಲಿ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗಬಹುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗೋಹತ್ಯೆ ನಿಷೇಧ ಕಾಯ್ದೆದೆ ವಾಪಸ್ ಪಡೆಯುವ ಪ್ರಸ್ತಾಪ ಉಲ್ಲೇಖಿಸಿ ಹೇಳಿದರು.

Advertisement

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕೃತಿ ಇದೆ.ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಯ ಉದ್ದೇಶಕ್ಕೆ ಬಿಜೆಪಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿತ್ತು. ಮಹಾತ್ಮ ಗಾಂಧಿಯೂ ಗೋಸಂರಕ್ಷಣೆ ಆಗಬೇಕೆಂದು ಹೇಳಿದ್ದರು ಎಂದರು. ಕೆಲವು ಆಚರಣೆಯ ವೇಳೆ ಗೋ ಹತ್ಯೆ ಆಗುತ್ತದೆ. ಗೋವುಗಳ ರಕ್ಷಣೆಗಾಗಿ ನಾವು ಕಾನೂನು ತಂದಿದ್ದು, ಕಾನೂನು ಜಾರಿಯಲ್ಲಿರುವಾಗ ಗೋ ಕಳ್ಳತನ, ಗೋ ಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಚಿವ ಪ್ರಿಯಾಂಕ ಖರ್ಗೆ ಅವರು ಎಚ್ಚರಿಕೆಯಿಂದ ಮಾತನಾಡಬೇಕು. ಜನರ ಆಶಯಗಳಿಗೆ ಸರ್ಕಾರ ಗೌರವ ನೀಡಬೇಕು. ಪೊಲೀಸರೂ ಗೋ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ರಾಜಧಾನಿಯಾಗಲಿದೆ ದೆಹಲಿ: ಮುಖ್ಯಮಂತ್ರಿ ಕೇಜ್ರಿವಾಲ್

Advertisement

Udayavani is now on Telegram. Click here to join our channel and stay updated with the latest news.

Next