ದಾವಣಗೆರೆ : ಸಂಪುಟ ರಚನೆ ಅಥವಾ ಪುನಾರಚನೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಕೇಂದ್ರದ ನಾಯಕರ ಜೊತೆ ಮಾತನಾಡಿದ್ದಾರೆ ಇನ್ನು ಕೆಲವೇ ದಿನಗಳಲ್ಲಿ ಇದಕ್ಕೆ ಸರಿಯಾದ ಉತ್ತರ ಸಿಗಲಿದೆ. ಅದು ರಚನೆಯೋ ಪುನಾರಚನೆಯೋ ಎಂಬುದುದನ್ನು ನೀವೇ ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ದಾವಣಗೆರೆಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾಯಕತ್ವದ ಬದಲಾವಣೆಯ ಬಗ್ಗೆ ಯಾವುದೇ ವಿಚಾರ ಇಲ್ಲ. ಮುಂದಿನ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ಸಿಎಂ ಭೇಟಿ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆಃ ನೀಡಿದ ಕಟೀಲ್ ನಾವು ಸಹಜವಾಗಿ ಭೇಟಿಯಾಗುತ್ತೇವೆ ಅಲ್ಲದೆ ಪ್ರತಿ 15 ದಿನಕ್ಕೊಮ್ಮೆ ನಾವು ಸಿಎಂ ಭೇಟಿಯಾಗುತ್ತೇವೆ ಅದರಲ್ಲಿ ಯಾವುದೇ ಹೊಸತನವಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಮಂಡ್ಯ :ಅಂಬರೀಷ್ ಅಭಿಮಾನಿಗಳಿಂದ ಅಂಬಿ ಗುಡಿ ನಿರ್ಮಾಣ:ದರ್ಶನ್, ಸುಮಲತಾರಿಂದ ಪುತ್ಥಳಿ ಅನಾವರಣ
ನಿಗಮ ಮಂಡಳಿಗೆ 500 ಕೋಟಿ ಮೀಸಲಿಟ್ಟಿರುವ ವಿಚಾರವಾಗಿ ಮಾತನಾಡಿದ ಅವರು ಬೇಡಿಕೆ ಇದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಎಲ್ಲಾ ಸಮುದಾಯಕ್ಕೂ ನ್ಯಾಯ ಒದಗಿಸಲಿದ್ದಾರೆ ಎಂದರು. ಸರಕಾರ ನಡೆಸುವಾಗ ಎಲ್ಲಾ ಸಮಾಜವನ್ನು ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ ಹಾಗಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಗಲಿದೆ ಎಂದರು.