Advertisement
ನಗರದ ಬಿಜಿಎಸ್ ಸಮುದಾಯಭವನದಲ್ಲಿ ಬಿಜೆಪಿ ವತಿಯಿಂದ ನಡೆದ ಜನ ಸೇವಕ ಸಮಾವೇಶದಲ್ಲಿ ನೂತನ ಗ್ರಾಪಂ ಸದಸ್ಯರಿಗೆ ಅಭಿನಂದಿಸಿ ಮಾತನಾಡಿದರು.
Related Articles
Advertisement
ನಾಯಕತ್ವ ಬದಲಾವಣೆ ಬಿಜೆಪಿಯಲ್ಲಿಲ್ಲ:
ನಾಯಕತ್ವ ಬದಲಾವಣೆ ಬಿಜೆಪಿ ಪಕ್ಷದಲ್ಲಿಲ್ಲ. ಅದು ಇರುವುದು ಕಾಂಗ್ರೆಸ್ ಪಕ್ಷದಲ್ಲಿ. ನಾಯಕತ್ವಕ್ಕಾಗಿ ಕಿತ್ತಾಡುತ್ತಿದ್ದಾರೆ. ಇತ್ತ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದರೆ, ಅತ್ತ ಸತೀಶ್‌ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ನಾಯಕರು ನಾನು ಸಿಎಂ ಆಗುತ್ತೇನೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮೂರು ಭಾಗಗಳಾಗಿ ಒಡೆದು ಹೋಗಲಿದೆ ಎಂದು ಭವಿಷ್ಯ ನುಡಿದರು.
ಇದನ್ನೂ ಓದಿ:ಜ.15ರಿಂದ ಉನ್ನತ ಶಿಕ್ಷಣದ ಆಫ್‌ಲೈನ್ ತರಗತಿಗಳು ಪ್ರಾರಂಭ; ಹೊಸ SOP ಜಾರಿ: ಡಿಸಿಎಂ
ಬಿಜೆಪಿಗೆ ಜನರ ಒಲವು:
ಇಡೀ ರಾಜ್ಯದಲ್ಲಿ ಜನರು ಬಿಜೆಪಿ ಪರ ಇದ್ದಾರೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಬೀತಾಗಿದೆ. ಗ್ರಾಪಂ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾದರಿಯಾಗಿದ್ದಾರೆ. ನುಡಿದಂತೆ ನಡೆದ ಪ್ರಧಾನಿ ನರೇಂದ್ರ ಮೋದಿ ಅವರು ನಮಗೆಲ್ಲ ಆದರ್ಶರಾಗಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಜಗತ್ತಿನಲ್ಲಿ ಪರಿವರ್ತನೆ ಗಾಳಿ ಬೀಸಿದೆ. ಭಾರತದತ್ತ ಇಡೀ ಜಗತ್ತು ತಿರುಗಿ ನೋಡುವಂತೆ ಮಾಡಿದ್ದಾರೆ. ಗಾಂಧೀಜಯ ಕನಸು ನನಸು ಮಾಡಲು ಮುಂದಾಗಿದ್ದಾರೆ. ಪ್ರತಿ ಗ್ರಾಪಂ ಒಂದು ಕೋಟಿ ರೂ. ಅನುದಾನ ನೀಡುವ ಮೂಲಕ ಅಭಿವೃದ್ಧಿ ಮಾಡಲು ಹೊರಟಿದ್ದಾರೆ. ಅಂಬೇಡ್ಕರ್ ಅವರ ಪಂಚತೀರ್ಥಗಳನ್ನು ಸ್ಥಾಪಿಸಿದ್ದಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಮೂಲಕ ಗೋವುಗಳನ್ನು ರಕ್ಷಿಸಿದ್ದಾರೆ ಎಂದರು.
ಬಿಜೆಪಿ ನಂಬಿದವರ ಕೈಬಿಡುವುದಿಲ್ಲ:
ಬಿಜೆಪಿ ಪಕ್ಷ ಯಾವತ್ತೂ ನಂಬಿದವರ ಕೈಬಿಡುವುದಿಲ್ಲ. ನಮ್ಮ ಜೊತೆ ಬಂದಿದ್ದ 17 ಮಂದಿಗೂ ಸ್ಥಾನ ಕಲ್ಪಿಸಲಾಗಿದೆ. ಈಗಾಗಲೇ ಕೆಲವರು ಸಚಿವರಾಗಿದ್ದಾರೆ. ಇನ್ನೂ ಕೆಲವರು ಸಚಿವರಾಗಲಿದ್ದಾರೆ ಎಂದು ಹೇಳಿದರು.
ಸಚಿವರಾದ ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ, ಬಿ.ಸೋಮಶೇಖರ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವಥ್‌ನಾರಾಯಣ್, ಜಿಲ್ಲಾಧ್ಯಕ್ಷ ಕೆ.ಜೆ.ವಿಜಯ್‌ಕುಮಾರ್, ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯ ಡಾ.ಸಿದ್ದರಾಮಯ್ಯ, ಮನ್‌ಮುಲ್ ನಿರ್ದೇಶಕ ಸ್ವಾಮಿ, ಜಿಪಂ ಸದಸ್ಯ ಎನ್.ಶಿವಣ್ಣ, ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ನಗರ ಘಟಕ ಅಧ್ಯಕ್ಷ ವಿವೇಕ್, ಮಾಜಿ ಅಧ್ಯಕ್ಷರಾದ ಎಚ್.ಆರ್.ಅರವಿಂದ್, ಕೆ.ನಾಗಣ್ಣಗೌಡ ಸೇರಿದಂತೆ ಮತ್ತಿತರರಿದ್ದರು.