ಮೈಸೂರು: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂನ್ 4ರಂದು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ವಿಜೃಂಭಣೆ ಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿ ಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ. ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತ ನಾಡಿದರು.
ಕೊಡುಗೆ ತಿಳಿಸುವ ಕಾರ್ಯ ಮಾಡಿ: ಮೈಸೂರು ನಗರಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ರ ಕೊಡುಗೆ ಅಪಾರ. ಹೀಗಾಗಿ ಅವರ ಜಯಂತಿಯನ್ನು ಸರ್ಕಾರದ ವತಿ ಯಿಂದ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಎಲ್ಲಾ ಜನತೆಗೂ ಅವರ ಕೊಡುಗೆ ತಿಳಿಸುವ ಕಾರ್ಯ ನಡೆಯಬೇಕು ಎಂದರು.
ವಿವಿಧ ಕಲಾ ತಂಡ: ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಅಂದು ಬೆಳಗ್ಗೆ 10.30ಕ್ಕೆ ಕೆ.ಆರ್.ವೃತ್ತದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡುವರು. ಕಲಾತಂಡಗಳು ಭಾಗವಹಿಸಲಿವೆ. ಕಲಾಮಂದಿರದಲ್ಲಿಬೆಳಗ್ಗೆ 11.30ಕ್ಕೆ ಸಭಾ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಶಾಸಕ ಎಲ್. ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆಂದರು.
ನಂತರ ಮಧ್ಯಾಹ್ನ ಶಾಲಾ ಮಕ್ಕಳಿಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಕ್ಷ್ಯಚಿತ್ರ, ವಿಚಾರ ಗೋಷ್ಠಿ ನಡೆಯಲಿದೆ. ಸಂಜೆ 5ಕ್ಕೆ ನಾಟಕ ಪ್ರದರ್ಶನ ಏರ್ಪಡಿಸ ಲಾಗಿದೆ ಎಂದರು.
ಬಂದೋ ಬಸ್ತ್ ಮಾಡಿ: ಜಿಲ್ಲೆಯ ಕನ್ನಡ ಪರ ಸಂಘಟನೆಗಳವರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ಕನ್ನಡ ಪರ ಹೋರಾಟಗಾರ ತಾಯೂರು ವಿಠuಲ ಮೂರ್ತಿ, ಇತಿಹಾಸ ತಜ್ಞ ಪ್ರೊ.ನಂಜರಾಜೇ ಅರಸ್ ಮತ್ತಿತರರಿದ್ದರು.