ನವದೆಹಲಿ: ಉತ್ತರಾಖಂಡದ ಚಮೋಲಿಯ ಅಲಕಾನಂದ ನದಿ ದಡದ ಬಳಿ ವಿದ್ಯುತ್ ಪ್ರವಹಿಸಿ ಸಬ್ ಇನ್ಸ್ ಪೆಕ್ಟರ್, ಹೋಮ್ ಗಾರ್ಡ್ಸ್ ಸೇರಿದಂತೆ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಇದನ್ನೂ ಓದಿ:ಮಹಾ ಮಳೆಗೆ ನಲುಗಿದ ಗುಜರಾತ್: ರಸ್ತೆಗಳು ಜಲಾವೃತ, ಮುಳುಗಿದ ಕಾರುಗಳು, ಜನಜೀವನ ಅಸ್ತವ್ಯಸ್ತ
ಚಮೋಲಿಯ ಅಲಕಾನಂದ ನದಿ ಬಳಿ ನಮಾಮಿ ಗಂಗೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು, ವಿದ್ಯುತ್ ಪ್ರವಹಿಸಿದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡ ಘಟನಾ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ವಿವರಿಸಿದೆ.