ಚಿಕ್ಕಮಗಳೂರು: ಇತ್ತೀಚೆಗಷ್ಟೇ ಮಾಂಸದೂಟ, ಗೋರಿ ಪೂಜೆಯ ಬಗ್ಗೆ ವಿವಾದಗಳಿಗೆ ಕಾರಣವಾಗಿದ್ದ ದತ್ತಪೀಠದಲ್ಲಿ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ಕೋರ್ಟ್ ಆದೇಶ ಮೀರಿ ದತ್ತ ಪೀಠದ ಆವರಣದಲ್ಲಿ ನಮಾಜ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ದತ್ತಪೀಠದ ಆವರಣ ಮಾತ್ರವಲ್ಲದೆ ಗುಹೆಯ ಒಳಗೂ ನಮಾಜ್ ಮಾಡುತ್ತಿದ್ದಾರೆದು ಆರೋಪಿಸಲಾಗಿದೆ. ಆವರಣದಲ್ಲಿ ನಮಾಜ್ ಮಾಡುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ.
ಇದನ್ನೂ ಓದಿ:ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಕೋರ್ಟ್ ಆದೇಶದನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ. ದತ್ತಭಕ್ತರು ಸೇರಿದಂತೆ ಯಾರಿಗೂ ಯಾವುದೇ ಪೂಜೆಗೆ ಅವಕಾಶವಿಲ್ಲ. ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್ ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶವಿದೆ. ಆದರೆ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಪೂಜೆ ಮಾಡಲಾಗುತ್ತಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎನ್ನಲಾಗಿದೆ.
ದತ್ತ ಪೀಠದ ಆವರಣದಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.