ಬೆಂಗಳೂರು: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿಸಿಕೊಂಡಿದ್ದಲ್ಲದೇ ಅದನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ವಿಪತ್ತು ನಿರ್ವಹಣ ಕಾಯ್ದೆ-2005ರ ಸೆಕ್ಷನ್ 51ರಡಿ ಪ್ರಕರಣ ದಾಖಲಿಸಲು ಸರಕಾರಕ್ಕೆ ನಿರ್ದೇಶ ನೀಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.
ಈ ಸಂಬಂಧ ಈಗಾಗಲೇ ಪಿಐಎಲ್ ಸಲ್ಲಿಸಿರುವ ವಕೀಲೆ ಗೀತಾ ಮಿಶ್ರಾ ಇದೀಗ ಮತ್ತೂಂದು ಮಧ್ಯಾಂತರ ಅರ್ಜಿ ಸಲ್ಲಿಸಿದ್ದಾರೆ.
ದಿಲ್ಲಿಯ ಧಾರ್ಮಿಕ ಸಭೆಗೆ ಹೋಗಿ ಬಂದು ಸದ್ಯ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಕ್ವಾರಂಟೈನ್‌ನಲ್ಲಿರುವ ಗುಂಪು ಶುಕ್ರವಾರದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ಇದೇ ರೀತಿಯ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ಅರ್ಜಿದಾರರು ವಿವರಿಸಿದ್ದಾರೆ.
ಇದೇ ವೇಳೆ ಅಗತ್ಯ ವಸ್ತುಗಳನ್ನು ಹೊತ್ತು ಹೊರಗಡೆಯಿಂದ ಬರುವ ವಾಹನಗಳ ಚಾಲಕರಿಂದ ಲಂಚ ಪಡೆದ ಅರ್‌ಟಿಒ ಅಧಿಕಾರಿಗಳ ವಿರುದ್ಧವೂ ವಿಪತ್ತು ನಿರ್ವಹಣ ಕಾಯ್ದೆಯಡಿ ಪ್ರಕರಣ ದಾಖಲಿ ಸುವಂತೆ ಸರಕಾರಕ್ಕೆ ನಿರ್ದೇಶ ನೀಡುವಂತೆಯೂ ಕೋರಲಾಗಿದೆ.