Advertisement
ನಗರದ ಸುಭಾಶ್ಚಚಂದ್ರ ಬೋಸ್ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನೆ ನಡೆಸಿದ ಸಮಾಜದ ಬಾಂಧವರು, ಕೂಡಲೇ ಒಂದು ಎಕ್ಸ್‌ಪ್ರೆಸ್ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿಡಬೇಕೆಂದು ಒತ್ತಾಯಿಸಿದರು.
ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಪ್ರಮುಖರಾಗಿದ್ದಾರೆ. ಹರಿಗೋಲಿನಲ್ಲಿ ಹೊಳೆಯನ್ನು ದಾಟಿಸುವ ಕಾಯಕ ಮಾಡಿಕೊಂಡು ಜನರಿಗೆ ನದಿಯ
ಒಂದು ದಡದಿಂದ ಇನ್ನೊಂದು ದಡಕ್ಕೆ ಹೋಗಲು ಅನುವು ಮಾಡಿಕೊಡುತ್ತಾ ಅನೇಕ ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಮಹತ್ವದ ಕೊಡುಗೆ ನೀಡಿದ್ದಾರೆ. ಕಬ್ಬಲಿಗ ಸಮಾಜದಿಂದ ಬಂದು
ಮಹಾನ್ ವಚನಗಳನ್ನು ರಚಿಸುವ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದರು. ಸಾಧನೆ ಮಾಡಿದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರು ಚಿರಸ್ಥಾಯಿಯಾಗಿ ಉಳಿವಂತಾಗಲು ಇವರ ಹೆಸರನ್ನು ಕರ್ನಾಟಕದಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿಗೆ ಹೆಸರು ಇಡಬೇಕೆಂದು ಒತ್ತಾಯಿಸಿದರು.
Related Articles
Advertisement
ಈ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕರ ಮುಖಾಂತರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಮೇಶ, ನಾಗಪ್ಪ, ಸಿದ್ದಪ್ಪ, ಅಶೋಕ, ಬಿ. ಮಹೇಶ, ವಿಜಯ ಹಣಮಂತ, ಮಲ್ಲಪ್ಪ, ಮಹಾದೇವ, ಎಸ್.ಪಿ. ಕಟ್ಟಿಮನಿ ಇದ್ದರು.