Advertisement

ಪಿಕಾರ್ಡ್‌ ಬ್ಯಾಂಕ್‌ ಕಟ್ಟಡಕ್ಕೆ ನೇಗಿಲ ಯೋಗಿ ಹೆಸರಿಡಿ

09:44 PM Sep 23, 2019 | Lakshmi GovindaRaju |

ಚಿಕ್ಕಬಳ್ಳಾಪುರ: ನೂತನವಾಗಿ ನಿರ್ಮಿಸಲಾಗುತ್ತಿರುವ ಪಿಕಾರ್ಡ್‌ ಬ್ಯಾಂಕ್‌ಗೆ ನೇಗಿಲ ಯೋಗಿ ಭವನ ಎಂದು ಹೆಸರಿಡುವಂತೆ ಅರ್ನಹ ಶಾಸಕ ಡಾ.ಕೆ.ಸುಧಾಕರ್‌, ಆಡಳಿತ ಮಂಡಳಿಗೆ ಸಲಹೆ ನೀಡಿ ಸಹಕಾರ ಕ್ಷೇತ್ರದಲ್ಲಿ ಯಾರು ಕೂಡ ಹಸ್ತಕ್ಷೇಪ ಮಾಡಬಾರದು ಎಂದರು. ನಗರದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ 2018-19ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Advertisement

ಸಹಕಾರಿ ಕ್ಷೇತ್ರ ರಾಜಕಾರಣ ಹೊರತಾಗಿ, ರೈತರ ಏಳಿಗೆ ಪೂರಕವಾಗಿ ಕೆಲಸ ಮಾಡಬೇಕು. ದಕ್ಷಿಣ ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಆದರೆ ನಮ್ಮ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಪ್ರಬಲವಾಗಿ ಬೆಳೆಯುತ್ತಿರುವುದು ಶ್ಲಾಘನೀಯ. ಕಳೆದ 60 ವರ್ಷಗಳಿಂದ ಇಲ್ಲಿ ಅನೇಕರು ಅಧ್ಯಕ್ಷರಾಗಿ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಸಹ ನಾವು ಸ್ಮರಿಸಬೇಕು. ಈಗ ಯುವಕರಿಗೆ ಅವಕಾಶ ಸಿಕ್ಕಿದೆ. ಅವರಿಗೆ ಅಭಿವೃದ್ಧಿ ಮಾಡಲು ಸಹಕಾರಿ ನೀಡಬೇಕಿದೆ ಎಂದು ತಿಳಿಸಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಪಿ.ನಾಗೇಶ್‌ ಮಾತನಾಡಿ, ಮೊದಲು ಬ್ಯಾಂಕ್‌ ದುಸ್ಥಿತಿಯಲ್ಲಿತ್ತು. ನಮ್ಮ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದ ಬಳಿಕ ಬ್ಯಾಂಕ್‌ ಸಾಕಷ್ಟು ಪ್ರಗತಿ ಸಾಧಿಸಿದೆ. ಸುಮಾರು 4,000 ಸದಸ್ಯತ್ವ ಮಾಡಿಸಿದ್ದೇವೆ. ಬ್ಯಾಂಕಿನ ವಾಣಿಜ್ಯ ಸಂಕೀರ್ಣದಿಂದ ವಾರ್ಷಿಕ 1 ಕೋಟಿ ಬಾಡಿಗೆ ಬರಲಿದೆ. ಅದರಿಂದ ಸ್ವಂತ ಬಂಡವಾಳದಲ್ಲಿ ರೈತರಿಗೆ ಸಾಲ ನೀಡುವ ಯೋಚನೆ ಇದೆ ಎಂದು ತಿಳಿಸಿದರು. ನೂತನ ಕಾಯ್ದೆ ತಿದ್ದುಪಡಿಯಂತೆ ಬ್ಯಾಂಕ್‌ನಲ್ಲಿ ನಡೆಯುವ ಸಭೆಗಳಿಗೆ ಹಾಜರಾಗದ ಹಾಗೂ ಕನಿಷ್ಠ ಒಂದು ವರ್ಷದಲ್ಲಿ ಮೂರು ಬಾರಿ ಬ್ಯಾಂಕ್‌ ವ್ಯವಹಾರ ನಡೆಸದವರ ಸದಸ್ಯತ್ವವನ್ನು ರದ್ದುಪಡಿಸಲಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಅಂತಹವರಿಗೆ ಮತದಾನ ಮಾಡುವ ಹಕ್ಕು ಇರುವುದಿಲ್ಲ’ ಎಂದು ಹೇಳಿದರು.

ಸಭೆಯಲ್ಲಿ 2017-18ನೇ ಸಾಲಿನ ಆಡಳಿತ ವರದಿ, ಖರ್ಚು ವೆಚ್ಚ, ಲೆಕ್ಕ ಪರಿಶೋಧಕರ ವರದಿ ಮಂಡಿಸಿ ಅಂಗೀಕರಿಸಲಾಯಿತು. ತಾಪಂ ಸದಸ್ಯ ಪಿ.ಎನ್‌.ಕೇಶವರೆಡ್ಡಿ, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮೋಹನ್‌ ರೆಡ್ಡಿ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಆವುಲರೆಡ್ಡಿ, ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮೇಗೌಡ, ಬ್ಯಾಂಕ್‌ ಉಪಾಧ್ಯಕ್ಷೆ ಅಕ್ಕಲಮ್ಮ, ನಿರ್ದೇಶಕರಾದ ಕೆ.ಎನ್‌.ಕೃಷ್ಣಮೂರ್ತಿ, ಜಿ.ನಾರಾಯಣಸ್ವಾಮಿ, ಕೆ.ಪಿ.ಚನ್ನಬೈರೇಗೌಡ, ಎಂ.ಶ್ರೀನಿವಾಸ್‌, ಕೆ.ಕೃಷ್ಣಪ್ಪ, ಸಿ.ನಾರಾಯಣಸ್ವಾಮಿ, ಎಂ.ಚನ್ನಕೇಶವ ಇತರರು ಇದ್ದರು.

ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಕೈ ಬಿಟ್ಟಿದ್ದಕ್ಕೆ ಕಿಡಿ: ರಾಜ್ಯ ಸರ್ಕಾರ ಈಗಾಗಲೇ 27 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳು ಎಂದು ಘೋಷಣೆ ಮಾಡಿದೆ. ಆದರೆ ಆ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿಲ್ಲ ಎಂದು ಡಾ.ಕೆ.ಸುಧಾಕರ್‌ ಕಿಡಿಕಾರಿದರು. ರಾಜ್ಯದಲ್ಲಿ ಅತಿ ಹೆಚ್ಚು ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆ ಚಿಕ್ಕಬಳ್ಳಾಪುರ, ಕುಡಿಯವ ನೀರಿನ ಹೆಚ್ಚು ಟ್ಯಾಂಕರ್‌ ಬಳಕೆ ಮಾಡಲಾಗುತ್ತಿದೆ. ಆದರೆ ಕಂದಾಯ ಅಧಿಕಾರಿಗಳು ಯಾವ ಕಾರಣಕ್ಕೆ ಬರದ ಪಟ್ಟಿಯಿಂದ ಚಿಕ್ಕಬಳ್ಳಾಪುರ ಕೈ ಬಿಟ್ಟಿದ್ದಾರೆಂಬುದು ಅರ್ಥವಾಗಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next