Advertisement
ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ನಿಂತು ಉದಾತ್ತವಾಗಿ ದೇಣಿಗೆ ನೀಡುವಂತೆ ಇದೇ ವೇಳೆ ಮನವಿ ಮಾಡಿದರು.
Related Articles
Advertisement
56 ಸಾವಿರ ಮನೆ ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಿಸಿದ್ದೇವೆ. ಅಧಿಕಾರಿಗಳು, ನಾನು ಪ್ರವಾಹ ಮಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿದ್ದೇವೆ. ರಕ್ಷಣೆ, ಪರಿಹಾರ ಕೆಲಸ ನಡೆಯುತ್ತಿದೆ. ಕಳೆದೆರಡು ದಿನದಿಂದ ಮಳೆ ಹತೋಟಿಗೆ ಬಂದಿದೆ. ಇನ್ನೂ ಸಂಪೂರ್ಣ ಚಿತ್ರಣ, ನಷ್ಟ ತಿಳಿಯಲು ಇನ್ನು ಕೆಲವು ದಿನ ಬೇಕಾಗಲಿದೆ.
23 ಜಿಲ್ಲೆಗಳ ಪೈಕಿ 200 ಗ್ರಾಮವನ್ನು ಸ್ಥಳಾಂತರಿಸುವ ಪರಿಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಉದ್ಯಮಿದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಿ.
10 ಕೋಟಿಗೂ ಹೆಚ್ಚು ನೆರವು ನೀಡಿದ ಗ್ರಾಮಕ್ಕೆ ನಿಮ್ಮ ಸಂಸ್ಥೆ ಹೆಸರನ್ನೇ ಇಡಲು ತೀರ್ಮಾನಿಸಿದ್ದೇವೆ. ಆ ಗ್ರಾಮವನ್ನು ಹಣ ನೀಡುವ ಸಂಸ್ಥೆ ದತ್ತು ಪಡೆದುಕೊಂಡಂತೆ ಬಿಂಬಿಸಲಾಗುವುದು ಎಂದು ಹೇಳಿದರು.
ಬಟ್ಟೆ, ಆಹಾರ ಧಾನ್ಯ ಇತರೆ ಮೂಲಸೌಕರ್ಯ ಒದಗಿಸಿಕೊಡುವ ಬದಲು ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರೆ ಸಂತ್ರಸ್ತರಿಗೆ ಹೆಚ್ಚು ನೆರವಾಗಲಿದೆ ಎಂದು ಹೇಳಿದರು.
ಎಲ್ಲಾ ಕೈಗಾರಿಕೋದ್ಯಮಿಗಳೊಂದಿಗೆ ನಮ್ಮ ಸರಕಾರ ಇದೆ. ನೀವು ಏನು ಸಹಕಾರ ಬಯಸುತ್ತೀರ ಅದನ್ನು ನಾವು ಕೊಡಲು ಸಿದ್ಧ.
ನಿಮ್ಮ ಸಂಸ್ಥೆ ಉದ್ಯಮ ನಡೆಸಲು ಬೇಕಾದ ಮೂಲಸೌಕರ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರಕಾರದಿಂದ ಯಾವುದೇ ಸಮಸ್ಯೆ ತೊಡಕು ಆಗುವುದಿಲ್ಲ. ಒಂದು ವೇಳೆ ಅನಗತ್ಯ ಸಮಸ್ಯೆ ಆಗುತ್ತಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಎಲ್ಲಾ ಸಂಸ್ಥೆಗಳ ಮುಖ್ಯಸ್ಥರಿಗೆ ಸಿಎಂ ಭರವಸೆ ನೀಡಿದರು.
ಇದೇವೇಳೆ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ , ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜಲ್ ಕೃಷ್ಣ ಉಪಸ್ಥಿತರಿದ್ದರು.