Advertisement

ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಮರಿಗೆ ಇಂದು ನಾಮಕರಣ ಶಾಸ್ತ್ರ, ಹೆಸರೇನು ಗೊತ್ತಾ?

04:01 PM Aug 31, 2020 | sudhir |

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲಕ್ಷ್ಮೀ ಕಳೆದ‌ ಜುಲೈ1 ರಂದು ಹೆಣ್ಣು ಮರಿಗೆ ಜನ್ಮ ನೀಡಿದ್ದು ಆ ಆನೆ ಮರಿಯ ನಾಮಕರಣ ಆ.31 ರಂದು ತುಲಾ ಲಗ್ನ ಮುಹೂರ್ತದಲ್ಲಿ ನಡೆಯಿತು.

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ವಿಧಿ ನೆರವೇರಿಸಿದರು.

ಧರ್ಮಸ್ಥಳದ ಡಾ.ಡಿ.ಹೆಗ್ಗಡೆ ಮೊಮ್ಮಗಳು ಮಾನ್ಯ ಅವರು ಶಿವಾನಿ ಹೆಸರು ಉದ್ಘೋಶಿಸುವ ಮೂಲಕ ನಾಮಕರಣ ಮಾಡಿದರು.

ಶ್ರೀಧಾಮ‌ ಮಾಣಿಲದ ಮೋಹನದಾಸ ಸ್ವಾಮೀಜಿ ಆನೆಯ ಮಾವುತ ಕೃಷ್ಣ ರಿಗೆ ಸನ್ಮಾನ ನೆರವೇರಿಸಿದರು.

ಈ‌ ಸಂದರ್ಭದಲ್ಲಿ ಹೇಮಾವತಿ ವಿ ಹೆಗ್ಹಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ, ಸೋನಿಯಾ ವರ್ಮಾ, ಅಮಿತ್, ಶ್ರದ್ಧಾ ಅಮಿತ್, ವೀರು ವಿ ಶೆಟ್ಟಿ, ದೇವಳದ ಶ್ರೀ ದೇವಳದ ಪಾರುಪತ್ಯಗಾರ ಪಿ‌ ಲಕ್ಷ್ಮೀನಾರಾಯಣ ರಾವ್ ಹಾಗೂ ಕುಟುಂಬಸ್ಥರು.

Advertisement

Advertisement

Udayavani is now on Telegram. Click here to join our channel and stay updated with the latest news.

Next