Advertisement

Namma Jatre: ಐಟಿ ಸಿಟಿಯಲಿ ಜಾನಪದ ಸೊಗಡಿನ “ನಮ್ಮ  ಜಾತ್ರೆ”

10:35 AM Dec 11, 2023 | Team Udayavani |

ಬೆಂಗಳೂರು: ಕನ್ನಡ ನಾಡಿನ ಭಾಷೆ ಮತ್ತು ಸಂಸ್ಕೃತಿ ಎಲ್ಲರನ್ನೂ ಆಕರ್ಷಿಸುವಂತಹದ್ದಾಗಿದೆ. ಆದರೆ, ಬೆಂಗಳೂರಿನಲ್ಲಿ ನಾವು ಕನ್ನಡ ಭಾಷಾ ಬಳಕೆ ಕಡಿಮೆ ಮಾಡಿ ಅನ್ಯ ಭಾಷೆ ಮೇಲೆ ವ್ಯಾಮೋಹಿತರಾಗಿದ್ದೇವೆ. ಅದನ್ನು ಬಿಡದೆ ಹೋದರೆ ಕನ್ನಡ ಭಾಷೆ ಬೆಳವಣಿಗೆ ಆಗಲಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

Advertisement

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ರವೀಂದ್ರ ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ “ನಮ್ಮ ಜಾತ್ರೆ, ಜಾನಪದ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಂಗ್ಲ ಭಾಷೆ ಜೀವನಕ್ಕೆ ಬೇಕು, ಅದನ್ನು ಕಲಿಯಿರಿ. ಆದರೆ, ನಮ್ಮ ದಿನನಿತ್ಯದ ಆಡು ಭಾಷೆಯಾಗಿ ಕನ್ನಡವನ್ನು ಬಳಸಿರಿ ಎಂದು ಹೇಳಿದರು.

ಪೂಜಾ ಗಾಂಧಿಯಂತೆ ಕನ್ನಡ ಕಲಿಯಿರಿ: ಈಗಾಗಲೇ ಪಂಜಾಬಿನಿಂದ ಚಂದನವನಕ್ಕೆ ಕಾಲಿರಿಸಿರುವ ನಟಿ ಪೂಜಾ ಗಾಂಧಿ ಅವರು ಕನ್ನಡ ಕಲಿತು ಮಾತನಾಡುತ್ತಿದ್ದಾರೆ. ಅದು ಶ್ಲಾಘನೀಯ. ಅವರಂತೆಯೇ ಇತರರೂಕನ್ನಡ ಕಲಿತು ಬಳಸುವಂತಾದರೆ ಕನ್ನಡದ ಏಳಿಗೆ ತನಗೆ ತಾನೆ ಆಗುತ್ತದೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ಕಾರ್ಯಕ್ರಮ: ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವರ್ಷ ಪೂರ್ತಿ ಪ್ರತಿ ತಿಂಗಳು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿಯೂ ಮುಂದಿನ ನಾಲ್ಕು ತಿಂಗಳಲ್ಲಿ ಭಿನ್ನ ರೀತಿಯ ಜನಪದ ಕಾರ್ಯಕ್ರಮಗಳು ನಡೆಯಲಿವೆ. ಇದಾದ ಬಳಿಕ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಮತ್ತೂಂದು ಸುವರ್ಣ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. ನಗರ ಜೀವನದ ಒತ್ತಡದಲ್ಲಿ ಜೀವಿಸುತ್ತಿರುವ ಬೆಂಗಳೂರಿಗರಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ತಲುಪಿಸುವ ಪರಿಚಯಿಸುವ ನಿಟ್ಟಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳು ಆಗಬೇಕಿದೆ ಎಂದರು.

ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಚಿರಂಜೀವಿ ಸಿಂಗ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್‌.ಮಂಜುಳಾ, ಇಲಾಖೆ ನಿರ್ದೇಶಕಿ ಡಾ.ಧರಣಿ ದೇವಿ ಮಾಲಗತ್ತಿ ಉಪಸ್ಥಿತರಿದ್ದರು.

Advertisement

ಕನ್ನಡ ಅತ್ಯಂತ ಸುಂದರವಾದ ಭಾಷೆ ಆಗಿದೆ. ಅದು ನನಗೆ ಬದುಕು ಕೊಟ್ಟಿದೆ. ಕನ್ನಡ ನಾಡಿನಲ್ಲಿರುವ ಪ್ರತಿಯೊಬ್ಬರು ಕನ್ನಡದ ಬಗ್ಗೆ ಗೌರವ, ಆದರಗಳನ್ನು ಬೆಳೆಸಿಕೊಳ್ಳಬೇಕು. ಪೂಜಾ ಗಾಂಧಿ, ನಟಿ.

 

Advertisement

Udayavani is now on Telegram. Click here to join our channel and stay updated with the latest news.

Next