Advertisement

ನಮೋ-ಜೋಶಿ ಪ್ರಮಾಣವಚನ ಸಂಭ್ರಮ

09:51 AM May 31, 2019 | Team Udayavani |

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಆರಿಸಿ ಬಂದ ಸಂಸದ ಪ್ರಹ್ಲಾದ ಜೋಶಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುತ್ತಿದ್ದಂತೆ ಅವರ ಹಿರಿಯ ಸಹೋದರ ಗೋವಿಂದ ಜೋಶಿ ನಿವಾಸದಲ್ಲಿ ಸಂಭ್ರಮ ಮನೆ ಮಾಡಿತು. ಪ್ರಹ್ಲಾದ ಜೋಶಿ ಅವರು ಪ್ರಮಾಣವಚನ ಸ್ವೀಕರಿಸಲು ನವದೆಹಲಿಗೆ ಬುಧವಾರ ಸಂಜೆಯೇ ತೆರಳಿದ್ದು, ಗುರುವಾರ ಬೆಳಗ್ಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳು ತೆರಳಿದ್ದಾರೆ. ಹೀಗಾಗಿ ಅವರ ಮನೆಯಲ್ಲಿ ಯಾರೂ ಇಲ್ಲ. ಇತ್ತ ಪ್ರಹ್ಲಾದ ಜೋಶಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಇಲ್ಲಿನ ಕೇಶ್ವಾಪುರ ಮಯೂರ ವಿಹಾರದಲ್ಲಿರುವ ಅವರ ಹಿರಿಯ ಸಹೋದರ ಗೋವಿಂದ ಜೋಶಿ ನಿವಾಸದಲ್ಲಿ ಕುಟುಂಬದ ಸದಸ್ಯರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next