Advertisement
ಪರಂಪರೆಯಂತೆ ನಂದಳಿಕೆ ಚಾವಡಿ ಆರಮನೆಯಿಂದ ಶ್ರೀ ಸುಂದರರಾಮ ಹೆಗ್ಡೆಯವರನ್ನು ಮೆರವಣಿಗೆಯೊಂದಿಗೆ ಕರೆತರಲಾಗಿ ಕ್ಷೇತ್ರದಲ್ಲಿ ಅಯನೋತ್ಸವ, ಉತ್ಸವ ಬಲಿ, ಕೆರೆ ದೀಪೋತ್ಸವ, ಬಲ್ಲೇಶ್ವರ ಪೂಜೆ ,ಕಟ್ಟೆಪೂಜೆ ಮಹೋತ್ಸವ ನಡೆದು ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿ ಧಿಯಲ್ಲಿ ಶ್ರೀ ಸಿರಿ ಕುಮಾರ, ಅಬ್ಬಗ ದಾರಗ ದರ್ಶನಾವೇಶಪೂರ್ವಕ ಸೂರ್ಯೋದಯ ಪರ್ಯಂತ ಸಪ್ತ ಸತ್ಯದ ಸಿರಿಗಳ ವೈಭವದ ಸಿರಿಜಾತ್ರಾ ವಿ ವೈಭವದಿಂದ ನಡೆಯಿತು.
ಉಡುಪಿ, ದ.ಕ. ಮಾತ್ರವಲ್ಲದೆ ಚಿಕ್ಕಮಗಳೂರು, ಶಿವಮೊಗ್ಗ, ಸೇರಿದಂತೆ ಮಲೆನಾಡಿನ ಭಾರೀ ಭಕ್ತರು ಈ ಸಿರಿ ಜಾತ್ರೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಅನ್ನಸಂತರ್ಪಣೆಯ ಜತೆ ಅಚ್ಚುಕಟ್ಟಿನ ವ್ಯವಸ್ಥೆಗೆ ಹೆಸರಾದ ಸಿರಿ ಜಾತ್ರೆ ರಾತ್ರಿಯೂ ಅಷ್ಟೇ ವ್ಯವಸ್ಥಿತವಾಗಿ ನಡೆದು ಬಾರೀ ಮೆಚ್ಚುಗೆಗೆ ಪಾತ್ರವಾಯಿತು. ಸಿರಿ ಜಾತ್ರೆಯ ಈ ಸೊಬಗಿನಲ್ಲಿ ವಿವಿಧ ಕಲಾ ತಂಡಗಳೂ ಭಾಗವಹಿಸಿದ್ದವು.