Advertisement
ನಗರದ ಹೊರ ವಲಯದ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಪ್ರೇಮಾಮೃತಮ್ ಸಭಾಂಗಣದಲ್ಲಿ ಭಾನುವಾರ ಶ್ರೀ ಸತ್ಯಸಾಯಿ ಸಮೂಹ ಶಿಕ್ಷಣ ಸಂಸ್ಥೆಗಳ 45ನೇ ವರ್ಷದ ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿ ಅವರು ಮಾತನಾಡಿದರು.
Related Articles
Advertisement
ಶಾಸಕ ಡಾ.ಕೆ.ಸುಧಾಕರ್ ಮಾತನಾಡಿ, ಸಾಂಸ್ಕೃತಿಕ ಪರಂಪರೆಯಿಂದ ವಿಶ್ವಮಾನವರಾಗಬಹುದು. ಆಸೆಯೇ ದುಃಖಕ್ಕೆ ಮೂಲವಾದರೆ ಎಲ್ಲರನ್ನೂ ಪ್ರೇಮಿಸಿ ಸರ್ವರ ಒಳಿತಿಗಾಗಿ ಸೇವೆ ಸಲ್ಲಿಸುವುದೇ ಲೋಕ ಕಲ್ಯಾಣದ ಸೆಲೆ. ಅಲ್ಲಿಯೇ ಎಲ್ಲರ ಸುಖ, ಶಾಂತಿ, ನೆಮ್ಮದಿ ಇರುತ್ತದೆ ಎಂದರು. ನಾಗರಿಕ ಸಮಾಜ ನೆಮ್ಮದಿ ಕಾಣಬೇಕಾದರೆ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಿಕ್ಷಣ ದೊರೆಯಬೇಕು. ಅಂತಹ ಶಿಕ್ಷಣ ದೊರೆತರೆ ಎಲ್ಲರೂ ವಿಶ್ವ ಮಾನವರಾಗಿ ಬೆಳೆಯುತ್ತಾರೆ ಎಂದರು.
ವೇದಿಕೆಯಲ್ಲಿ ಅಮೆರಿಕಾದ ಭಕ್ತರು, ಯುನಿಸೆಫ್ ಸಂಸ್ಥೆಯ ಪ್ರತಿನಿಧಿಯೂ ಆದ ಮಿಸ್‌ಡಾನಾಗುಡ್‌ಮನ್ ಡಾ.ಕೆ.ಪಿ.ಸಾಯಿಲೀಲಾ, ಗುಲ್ಬರ್ಗಾ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾನಿಲಯದ ಕುಲಾಧಿಪತಿ ಬಿ.ಎನ್ ನರಸಿಂಹ ಮೂರ್ತಿ, ಕರಾವಳಿ ಕರ್ನಾಟಕದ ಶಿಕ್ಷಣ ತಜ್ಞ, ಡಾ.ಕೆ.ಪ್ರಭಾಕರ ಭಟ್ ಉಪಸ್ಥಿತರಿದ್ದರು.
ದೇಶದ ಪ್ರತಿ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ: ಸಮಾಂರಂಭದ ಸಾನ್ನಿಧ್ಯ ವಹಿಸಿದ್ದ ಸದ್ಗುರು ಮಧುಸೂದನ ಸಾಯಿಯವರು ದಿವ್ಯ ಸಂದೇಶ ನೀಡುತ್ತಾ, ಸಂಸ್ಥೆ, ಸಹಕಾರ ಮತ್ತು ಸರ್ಕಾರ ಒಂದಾಗಿ ಕೈ ಜೋಡಿಸಿದಾಗ ಮಹತ್ಕಾರ್ಯ ಸಾಧಿತವಾಗುತ್ತದೆ. ನಮ್ಮೊಳಗೆ ಸದಾ ಸಮನ್ವಯವಿದ್ದಾಗ ಯಾವುದೇ ಭಯವಿಲ್ಲ ಎಂದರು. ಮುಂದಿನ ದಿನಗಳಲ್ಲಿ ಸದ್ಭಕ್ತರ ನೆರವಿನಲ್ಲಿ ಭಾರತದ ಪ್ರತಿ ಜಿಲ್ಲೆಯಲ್ಲಿ ಸತ್ಯಸಾಯಿ ಸಂಸ್ಥೆಗಳು ತಲೆಯೆತ್ತಿ ಜಗತ್ ಕಲ್ಯಾಣಕ್ಕೆ ನೆರವು ನೀಡುವುದು. ಆ ದಿನ ಬಹುಬೇಗನೆ ಬರುವುದು ಎಂದರು.