Advertisement

ನಂದಿಗಿರಿಧಾಮ ಪ್ರಕೃತಿ ಸೌಂದರ್ಯ ದರ್ಶನ

04:07 PM Sep 08, 2020 | Suhan S |

ಶಿಡ್ಲಘಟ್ಟ: ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿಗರ ನೆಚ್ಚಿನ ತಾಣ ನಂದಿಗಿರಿಧಾಮ ಸೋಮವಾರದಿಂದ ಸಾರ್ವಜನಿಕರಿಗೆ ಪ್ರವೇಶ ಮುಕ್ತಗೊಳಿಸಲಾಯಿತು.

Advertisement

ಕೇಂದ್ರ ಸರ್ಕಾರ ಅನ್‌ಲಾಕ್‌ 4 ಜಾರಿಗೊಳಿಸಿದ ಪರಿಣಾಮ ಜಿಲ್ಲಾಡಳಿತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿಬಂಧಗಳನ್ನು ವಿಧಿಸಿ ಐದು ತಿಂಗಳ ಬಳಿಕ ಪ್ರವೇಶ ಮುಕ್ತಗೊಳಿಸಿದ್ದರಿಂದ ಮೊದಲೇ ದಿನದಲ್ಲಿಯೇ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿಗಿರಿ  ಧಾಮಕ್ಕೆ ತೆರಳಿ ಆಗಮಿಸಿ ಪ್ರಕೃತಿ ಸೌಂದರ್ಯದ ದರ್ಶನ ಮಾಡಿದರು. ಗಿರಿಧಾಮಕ್ಕೆ ಪ್ರವೇಶಿಸುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶಿಸಲಾಗಿತ್ತು. ಆದರೆ ಗಿರಿಧಾಮಕ್ಕೆ ಪ್ರವೇಶ ದ್ವಾರದಲ್ಲಿ ಮಾಸ್ಕ್ ಧರಿಸಿ ಪ್ರವೇಶ ಮಾಡಿದ ಪ್ರವಾಸಿಗರು ಬಳಿಕ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ದೃಶ್ಯಗಳು ಸಾಮನ್ಯವಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಪ್ರವಾಸಿಗರು ಬಂದಿದ್ದರು. ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ನಂದಿ  ಗಿರಿಧಾಮಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಪ್ರವಾಸಿ ಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತ ಕೈಗೊಂಡಿದ್ದ ಸಿದ್ಧತೆಗಳನ್ನು ಕಂಡು ಪ್ರವಾಸಿಗರು ಆನ್‌ಲೈನ್‌  ಮೂಲಕ ಸಹ ನೋಂದಣಿ ಮಾಡಿಸಿಕೊಂಡಿದ್ದರು.

ಪೊಲೀಸರ ನಿಯೋಜನೆ: ನಂದಿ ಗಿರಿಧಾಮದಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಮತ್ತು ಭದ್ರತೆಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಜಿಲ್ಲಾ ಎಸ್ಪಿ ಮಿಥುನ್‌ ಕುಮಾರ್‌ ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕರನ್ನು ನಿಯೋಜಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next