Advertisement
ತಾಲೂಕಿನ ಐತಿಹಾಸಿಕ ನಂದಿ ಗಿರಿಧಾಮಕ್ಕೆ ಬುಧವಾರ ಭೇಟಿ ನೀಡಿ ಗಿರಿಧಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯ ಚಟುವಟಿಕೆಗಳ ಕುರಿತು ಜಿಲ್ಲೆಯ ಹಿರಿಯ ತೋಟಗಾರಿಕಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆಹಸ್ತಾಂತರಿಸುವಂತೆ ಇಲಾಖೆಯಿಂದ ಪ್ರಸ್ತಾವನೆ ಬಂದಿದ್ದು ನಿಜ. ಆದರೆ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲು ತೋಟಗಾರಿಕೆ ಇಲಾಖೆ ಸಿದ್ಧವಿಲ್ಲ.
ಜಕ್ಕಲಮಡಗು ಜಲಾಶಯದಿಂದ ಗಿರಿಧಾಮಕ್ಕೆ ಶಾಶ್ವತವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಚಿಂತನೆ ನಡೆಸಿದೆ. ಈ ಬಗ್ಗೆ ಇಲಾಖೆ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲಿ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
Related Articles
Advertisement
ಅಧಿಕಾರಿಗಳೊಂದಿಗೆ ಸಚಿವರ ಚರ್ಚೆ: ಈ ಸಂದರ್ಭದಲ್ಲಿ ಸಚಿವ ಎಂ.ಸಿ.ಮನಗೊಳಿ ನಂದಿ ಗಿರಿಧಾಮದಲ್ಲಿ ಈ ಹಿಂದೆ 2011-12ನೇ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿದ್ದ 16 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣ ಗೊಳಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿ, ಗಿರಿಧಾಮದಲ್ಲಿ ಆಗ ಬೇಕಾದ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.
ಸಚಿವರ ಪ್ರಗತಿ ಪರಿಶೀಲನೆ ವೇಳೆ ತೋಟಗಾರಿಕಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಕುಮಾರಸ್ವಾಮಿ, ಸಚಿವರ ಅಪ್ತ ಕಾರ್ಯದರ್ಶಿ ರವಿ ತಿರ್ಲಾಪುರ, ಸಚಿವರ ವಿಶೇಷಾಧಿಕಾರಿ ವಿನಯ್ ಕುಲಕರ್ಣಿ, ನಂದಿ ಗಿರಿಧಾಮ ವಿಶೇಷ ಅಧಿಕಾರಿಎನ್.ರಮೇಶ್, ಗಿರಿಧಾಮದ ಸಹಯಕ ತೋಟಗಾರಿಕಾ ಅಧಿಕಾರಿ ಈಶ್ವರ ನಾಯಕ್, ಚಿಕ್ಕಬಳ್ಳಾಪುರದ ಸಹಾಯಕ ತೋಟಗಾರಿಕಾ ಅಧಿಕಾರಿ ವಿ.ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಗಿರಿಧಾಮಕ್ಕೆ ಕೇಬಲ್ ಕಾರ್: ಭರವಸೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ನಂದಿ ಗಿರಿಧಾಮಕ್ಕೆ ಕೇಬಲ್ ಕಾರ್ ಅಳವಡಿಸುವ ಪ್ರಸ್ತಾವನೆ ಹಲವು ವರ್ಷಗಳಿಂದ ಅನುಷ್ಠಾನ ಗೊಳ್ಳದೇ ನೆನಗುದಿಗೆ ಬಿದ್ದಿರುವ ಕುರಿತು ಸುದ್ದಿ ಗಾರರು ಸಚಿವರ ಗಮನ ಸೆಳೆದಾಗ ಕೇಬಲ್ ಕಾರ್ ಅಳವಡಿಸುವ ಕಾರ್ಯ ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆ ಇಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಿ, ತಮ್ಮ ಅವಧಿಯಲ್ಲಿಯೆ ಗಿರಿಧಾಮಕ್ಕೆ ರೂಪ್ ವೇ (ಕೇಬಲ್ ಕಾರ್) ಅಳವಡಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತೋಟಗಾರಿಕಾ ಸಚಿವ ಎಂ.ಸಿ. ಮನಗೊಳಿ ಭರವಸೆ ನೀಡಿದರು.