Advertisement
ಜಿಲ್ಲೆಯ ನಂದಿಗಿರಿಧಾಮಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ನಂತರ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡುವುದರಿಂದ ವಾಣಿಜ್ಯಕರಣವಾಗಿ ಪರಿಸರಕ್ಕೆ ಧಕ್ಕೆ ಆಗುತ್ತದೆ ಎಂದು ಸ್ಥಳೀಯ ರೈತರು ವಿರೋದ ವ್ಯಕ್ತಪಡಿಸಿದ್ದಾರೆ ಹೀಗಾಗಿ ನಂದಿಗಿರಿಧಾಮವನ್ನು ತೋಟಗಾರಿಕೆ ಇಲಾಖೆಯಲ್ಲಿ ಮುಂದುವರೆಸಲು ಮುಖ್ಯ ಮಂತ್ರಿಗಳ ಮನವಿ ಮಾಡುವುದಾಗಿ ತಿಳಿಸಿದರು.
Related Articles
Advertisement
ರಾಜ್ಯದಲ್ಲಿ ಮಾತ್ರವಲ್ಲದೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಂದಿಗಿರಿಧಾಮದಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸಿ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಂಡು ಪ್ರಾಕೃತಿಕ ಸೌಂದರ್ಯವನ್ನು ತನ್ನ ಮಡಿಲಲ್ಲಿ ಇಟ್ಟುಕೊಂಡಿರುವ ನಂದಿಗಿರಿಧಾಮವನ್ನು ಯಾವುದೇ ಕಾರಣಕ್ಕೂ ತೋಟಗಾರಿಕೆ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವುದಿಲ್ಲ ತೋಟಗಾರಿಕೆ ಇಲಾಖೆಯ ನಿವೃತ್ತ ಅಧಿಕಾರಿಗಳು, ಪರಿಸರ ಪ್ರೇಮಿಗಳು ಮತ್ತು ಸ್ಥಳೀಯ ರೈತರು ಮತ್ತು ಪ್ರವಾಸಿಗರ ಸಲಹೆ ಸೂಚನೆಗಳನ್ನು ಪಡೆದು ನಂದಿಗಿರಿಧಾಮವನ್ನು ಮೇಲ್ದರ್ಜೆಗೆ ಏರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ; ಕೋವಿಡ್ ಸೋಂಕು: ಮೂಡಬಿದಿರೆ ಶಿಕ್ಷಕಿಗೆ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ: ಸುರೇಶ್ ಕುಮಾರ್
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು:ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಎರಡು ಕ್ಷೇತ್ರಗಳಲ್ಲಿ ಸಹ ಅಭ್ಯರ್ಥಿಗಳ ಪರವಾಗಿ ಮತಯಾಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಜಗದೀಶ್, ಉಪನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಡಿವೈಎಸ್‍ಪಿ ರವಿಶಂಕರ್, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.