Advertisement
ಘಟಕದಿಂದ ಸುತ್ತಮುತ್ತಲಿನ 3 ಕಿ. ಮೀ. ವ್ಯಾಪ್ತಿಯಲ್ಲಿ ಜಿಡ್ಡು ವಾಸನೆ ಹರಡುತ್ತಿದ್ದು, ಇದರಿಂದಾಗಿ ಪರಿಸರದ ಮನೆಗಳಲ್ಲಿರುವ ಮತ್ತು ಶಾಲಾ ಮಕ್ಕಳು ವಾಕರಿಕೆಯೊಂದಿಗೆ ಉಸಿರಾಟದ ತೊಂದರೆ ಅನುಭವಿಸುವಂತಾಗಿದೆ. ಸಮಸ್ಯೆ ಬಗ್ಗೆ ತಾಲೂಕು ಆಡಳಿತ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿತ್ತು.
Related Articles
ಒಂದು ವಾರದಿಂದ ಪರಿಸರದಲ್ಲಿ ದುರ್ವಾಸನೆ ಬೀರು ತ್ತಿದ್ದು, ಇದರಿಂದಾಗಿ ಶಾಲಾ ವಿದ್ಯಾರ್ಥಿ ಯೊಬ್ಬಳು ಅನಾರೋಗ್ಯಕ್ಕೆ ತುತ್ತಾಗಿರುವು ದಾಗಿಯೂ ಸ್ಥಳೀಯರು ತಿಳಿಸಿದ್ದಾರೆ. ಘಟಕದಿಂದ ಪರಿಸರದಲ್ಲಾಗುತ್ತಿರುವ ಸಮಸ್ಯೆಗಳ ಬಗ್ಗೆ ಸಾರ್ವಜನಿಕವಾಗಿ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜೂ. 18ರಂದು ಘಟಕಕ್ಕೆ ಭೇಟಿ ನೀಡಿದ್ದು, 15 ದಿನಗಳೊಳಗೆ ಸಮಸ್ಯೆ ಪರಿಹರಿಸು ವಂತೆ ತಾಕೀತು ಮಾಡಿ ದ್ದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದ ಕಾಂಗ್ರೆಸ್ ನಿಯೋಗ ಕೂಡ ಭೇಟಿ ನೀಡಿತ್ತು. ಆದರೂ ಈಗ ಸಮಸ್ಯೆ ಮತ್ತೆ ಉಲ್ಬಣಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Advertisement