Advertisement

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

06:56 PM Dec 03, 2024 | Team Udayavani |

ಕಾರ್ಕಳ: ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಪಕ್ಕದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಯನ್ನು ಮತ್ತೆ ಆರಂಭಿಸಲು ಕಂಪನಿ ಅಧಿಕಾರಿಗಳು ಮುಂದಾಗುತ್ತಿದ್ದಂತೆ ವಿಷಯ ತಿಳಿದ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಧಾವಿಸಿ ತೀವ್ರ ವಿರೋಧ ವ್ಯಕ್ತಪಡಿಸಿ ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ ‌

Advertisement

ಕೇಂದ್ರ ಬಿಜೆಪಿ ಸರಕಾರದ ಯೋಜನೆ ಇದಾಗಿದ್ದು ರಾಜ್ಯ ಬಿಜೆಪಿ ಸರಕಾರದ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಸುನೀಲ್ ಕುಮಾರ್ ಅನುಮತಿಯಿಂದ ಯೋಜನೆಯುವ ಅನುಮೋದನೆಗೊಂಡಿದೆ. ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಹೈ ಟೆನ್ಷನ್ ವಿದ್ಯುತ್ ತಂತಿಗಳು ಇನ್ನಾ ಗ್ರಾಮದ ಫಲವತ್ತಾದ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶದ ನಡುವೆ ಹಾದು ಹೋಗುವುದರಿಂದ ಇನ್ನಾ ಗ್ರಾಮದ ನೂರಾರು ಕೃಷಿಕರು ಸಂತ್ರಸ್ತರಾಗುವ ಅಪಾಯವಿದೆ ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಹಲವು ಅವಧಿಗೆ ಶಾಸಕರನ್ನಾಗಿ ಗೆಲ್ಲಿಸಿದ ಕಾರ್ಕಳ ಕ್ಷೇತ್ರದ ಜನರ ಬದುಕಿಗೆ ಕೊಳ್ಳಿ ಇಡುವ ಯೋಜನೆಯನ್ನು ಉಡುಗೊರೆಯಾಗಿ ಕೊಟ್ಟ ಪರಿಣಾಮ ಇಂದು ಇನ್ನಾ ಗ್ರಾಮದ ಜನತೆ ತಮ್ಮ ಕೃಷಿ ಭೂಮಿ ಮನೆಮಠಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ‌ ಎಂದು ಉದಯ್ ಶೆಟ್ಟಿ ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು, ಕೃಷಿಕರು, ಗ್ರಾಮಸ್ಥರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next