Advertisement

ನಂದಿನಿ ಹಾಲು-ಮೊಸರಿನ ದರ ಪರಿಷ್ಕರಣೆ

11:15 AM Apr 01, 2017 | Harsha Rao |

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ಬೆಲೆಯನ್ನು ಎ. 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಲಾಗಿದೆ.

Advertisement

ರಾಜ್ಯದಲ್ಲಿ ತೀವ್ರ ಬರಗಾಲವಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ನೀರು / ಮೇವಿನ ಕೊರತೆ ಹಿನ್ನೆಲೆಯಲ್ಲಿ ರಾಸುಗಳ ಸಾಕಣೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಂಗ್‌ ವೆಚ್ಚ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಮಾರುಕಟ್ಟೆ ದರವನ್ನು ಹೆಚ್ಚಿಸಿ ರೈತರಿಗೆ ಉತ್ತಮ ದರ ನೀಡುವ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.

ನಂದಿನಿ ಹಾಲು ಮತ್ತು ಮೊಸರನ್ನು ನಂದಿನಿ ಡೀಲರುಗಳು ಗರಿಷ್ಠ ಮಾರಾಟ ದರಕ್ಕೆ ಮೀರದಂತೆ ಮಾರಾಟ ಮಾಡಿ, ಗ್ರಾಹಕರಿಗೆ ಉತ್ತಮ ಸೇವೆ ನೀಡಬೇಕು. ಒಕ್ಕೂಟದಲ್ಲಿ ಈಗಾಗಲೇ ದಾಸ್ತಾನಿರುವ ಹಳೆಯ ದರ ನಮೂದಿಸಿರುವ ಪ್ಯಾಕಿಂಗ್‌ ಫಿಲಂ ದಾಸ್ತಾನು ಮುಗಿಯುವವರೆಗೆ ಅದೇ ಫಿಲಂನಲ್ಲಿ ನಂದಿನಿ ಹಾಲು ಮತ್ತು ಮೊಸರನ್ನು ಪ್ಯಾಕ್‌ ಮಾಡಿ ಸರಬರಾಜು ಮಾಡಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next