ಮೈಸೂರು: ಕ್ಷುಲ್ಲಕ ವಿಚಾರಕ್ಕೆ ಟೋಲ್ ಸಿಬ್ಬಂದಿಯೊಂದಿಗೆ ಆರಂಭಗೊಂಡ ಗಲಾಟೆ ಕೊಲೆಯಲ್ಲಿ ಅಂತ್ಯ ಗೊಂಡಿರುವ ಘಟನೆ ಮೈಸೂರು ನಂಜನಗೂಡು ರಸ್ತೆಯ ಟೋಲ್‌ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಮೈಸೂರು ತಾಲೂಕಿನ ಕಡಕೋಳ ಗ್ರಾಮದ ನಿವಾಸಿ ಗಣೇಶ್ (22) ಮೃತ ಯುವಕನ. ಟೋಲ್ ಕೇಳಿದ್ದಕ್ಕೆ ಆಕ್ರೋಶಗೊಂಡ ಯುವಕರ ಗುಂಪು ಟೋಲ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದೆ.
ಶನಿವಾರ ರಾತ್ರಿ ಮೈಸೂರಿನಿಂದ ನಂಜನಗೂಡಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕರ ಗುಂಪನ್ನು ಟೋಲ್‌ಗೇಟ್ ಬಳಿ ಸಿಬ್ಬಂದಿ ಗಣೇಶ್ ತಡೆದು ತುಲ್ಕ ಪಾವತಿಸುವಂತೆ ಹೇಳಿದ್ದಾರೆ. ಈ ವೇಳೆ ಗುಂಪಿನೊಂದಿಗೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಾರಿನ ಮಿರರ್ ಒಡೆದು ಹೋಗಿದೆ. ಈ ಸಂದರ್ಭ ಸ್ಥಳದಲ್ಲಿದ್ದ ಟೋಲ್ ಸಿಬ್ಬಂದಿ ಗಲಾಟೆ ಬಿಡಿಸಿ ಕಳಿಸಿದ್ದಾರೆ. ಆದರೆ ಗಲಾಟೆಯಿಂದ ಕೋಪಗೊಂಡಿದ್ದ ಯುವಕರ ಗುಂಪು ಭಾನುವಾರ ರಾತ್ರಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವ ವೇಳೆ ಟೋಲ್ ಬಳಿ ಬಂದಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಗಣೇಶ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ :ಅ.15ರ ವರೆಗೆ ರಾಜ್ಯದ ವಿವಿದೆಡೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ತೀವ್ರವಾಗಿ ಗಾಯಗೊಂಡಿದ್ದ ಗಣೇಶ್ನನು ಮೈಸೂರು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಂತೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಘಟನೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದ್ದು ನಾಲ್ಕೈದು
ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.