Advertisement
ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುವ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಮಹಾಪೂರವನ್ನೇ ಹರಿಸಿದ್ದಾರೆ. ಉಪಚುನಾವಣೆ ದಿನಾಂಕ ಘೋಷಣೆಯಾದರೆ, ಯೋಜನೆಗಳಿಗೆ ಮಂಜೂರಾತಿ ನೀಡಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್‌ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನಾ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂರಾ ಎಪ್ಪತ್ತು ಕೋಟಿ ರೂಪಾಯಿಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಸ್ತಾವನೆಗೆ ಅಂಕಿತ ಹಾಕಿದ್ದಾರೆ. ಕಾಮಗಾರಿಗಳಿಗೆ ಅನುಮೋದನೆ ನೀಡಿದ ದಾಖಲೆಗಳು ಉದಯವಾಣಿಗೆ ಲಭ್ಯವಾಗಿದೆ.
ಲೋಕೋಪಯೋಗಿ ಇಲಾಖೆ ಮೇಲುಸ್ತುವಾರಿಗೆ ನೀಡಲಾಗಿದೆ. ನಂಜನಗೂಡು ವಿಧಾನಸಭಾ ವ್ಯಾಪ್ತಿಯಲ್ಲಿ
ಬರುವ 9 ಗ್ರಾಮೀಣ ರಸ್ತೆಗಳು, 2 ನಗರಸಭಾ ರಸ್ತೆಗಳು, 4 ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ 2ರಾಜ್ಯ ಹೆದ್ದಾರಿ
ರಸ್ತೆಗಳು ಸೇರಿ ಒಟ್ಟು 17 ರಸ್ತೆಗಳನ್ನು 55 ಕೋಟಿ ವೆಚ್ಚದಲ್ಲಿ ಅಭಿವೃದ್ಧ ಪಡಿಸಲು ಸೂಚಿಸಲಾಗಿದ್ದು, ಕಾಮಗಾರಿಗಳನ್ನು ಬಿಡಿ ಬಿಡಿಯಾಗಿ ನೀಡಲಾಗಿದೆ. ಕಾಮಗಾರಿಗೆ ಕೋರಿರುವ ಅಂದಾಜು ವೆಚ್ಚಕ್ಕಿಂತ ಪ್ರತಿ ಗ್ರಾಮದ ರಸ್ತೆಗೂ ಕನಿಷ್ಠ ಒಂದು ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಸೇರಿಸಿ ಬಿಡುಗಡೆ ಮಾಡಲಾಗಿದೆ.
Related Articles
Advertisement