Advertisement

ಜೂ.15ಕ್ಕೆ  ನ್ಯಾನೋ ಯೂರಿಯಾ ಮಾರುಕಟ್ಟೆಗೆ

04:49 PM May 30, 2021 | Team Udayavani |

ಬೆಂಗಳೂರು: ಸಹಕಾರಿ ವಲಯದ ರಸಗೊಬ್ಬರ ಕಂಪನಿಇಪ್ಕೋ ಅಭಿವೃದ್ಧಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಡಿ.ವಿ.ಸದಾನಂದ ಗೌಡ ಹೇಳಿದರು.

Advertisement

ನ್ಯಾನೋ-ಯುರಿಯಾ ಉಪಯೋಗದ ಬಗ್ಗೆಇಫೊRà ಸಂಸ್ಥೆ ಶನಿವಾರ ಏರ್ಪಡಿಸಿದ್ದ ವೆಬಿನಾರ್‌ ಚರ್ಚೆಯನ್ನು ಉದ್ಘಾಟಿಸಿ ಮಾತನಾಡಿ, 240 ರೂ.ಬೆಲೆಯ 500 ಎಂಎಲ್‌ ನ್ಯಾನೋ ಯೂರಿಯಾ45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದ್ದುಜೂ.15ರಂದು ಮುಕ್ತ ಮಾರುಕಟ್ಟೆಯಲ್ಲಿದೊರೆಯಲಿದೆ ಎಂದರು. ಇದು ಪರಿಸರ ಸ್ನೇಹಿಯಾಗಿದ್ದುಮಣ್ಣಿನ ಫ‌ಲವತ್ತತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ನ್ಯಾನೋ ರಸಗೊಬ್ಬರದಿಂದ ಸಾಗುವಳಿ ವೆಚ್ಚದಲ್ಲಿಸುಮಾರು 15 ಪ್ರತಿಶತ ಕಡಿಮೆಯಾಗಲಿದೆ. ಇನ್ನುಇಳುವರಿಯಲ್ಲಿ 15ರಿಂದ 20ರಷ್ಟು ಹೆಚ್ಚಳವಾಗಲಿದೆ ಎಂದಸಚಿವರು ರೈತರು ಇದನ್ನು ಹೆಚ್ಚೆಚ್ಚು ಬಳಕೆ ಮಾಡಿ ಇದರಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು. ಭಾರತದಲ್ಲಿಈ ವರ್ಷ 350 ಲಕ್ಷ ಮೆಟ್ರಿಕ್‌ ಟನ್‌ ಯೂರಿಯಾಬೇಕಾಗಬಹುದು ಎಂದು ಅಂದಾಜು ಮಾಡಲಾಗಿದೆ.

ಆದರೆಈಗ ನ್ಯಾನೋ ಯೂರಿಯಾ ಮಾರುಕಟ್ಟೆಗೆಬರುತ್ತಿರುವದರಿಂದ ಮಾಮೂಲಿ ಯೂರಿಯಾಬಳಕೆ ಗಣನೀಯವಾಗಿ ಕಡಿಮೆಯಾಗಲಿದ್ದುಸುಮಾರು 600 ಕೋಟಿ ರೂ ಸಬ್ಸಿಡಿಉಳಿತಾಯವಾಗಲಿದೆ. ಯೂರಿಯಾ ಆಮದುಕಡಿಮೆಯಾಗಿ ವಿದೇಶಿ ವಿನಿಮಯ ಉಳಿಯಲಿದೆ.ಎಲ್ಲ ದೃಷ್ಟಿಯಿಂದಲೂ ನ್ಯಾನೋ ಯೂರಿಯಾಲಾಭಕರವಾಗಿದ್ದು ಇದನ್ನು ಜನಪ್ರಿಯಗೊಳಿಸಲು ಸರ್ಕಾರಗಮನಹರಿಸಲಿದೆ ಎಂದರು.ಮಣ್ಣಿನ ಪೌಷ್ಟಿಕಾಂಶ ಕಾಪಾಡಿಕೊಳ್ಳುವುದರ ಜೊತೆಗೇಸಾಗುವಳಿ ಹಾಗೂ ಸಾಗಣೆ ವೆಚ್ಚದಲ್ಲಿ ಅಪಾರ ಉಳಿತಾಯಮಾಡಲಿದೆ ಎಂದು ಇಫೊR ವ್ಯವಸ್ಥಾಪಕ ನಿರ್ದೇಶಕ ಡಾ.ಯು.ಎಸ್‌. ಅವಸ್ಥಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next