Advertisement
ನಂತೂರು ವೃತ್ತ ರಾಷ್ಟ್ರೀಯ ಹೆದ್ದಾರಿ 66, ರಾಷ್ಟ್ರೀಯ ಹೆದ್ದಾರಿ 75 ಹಾಗೂ ರಾಷ್ಟ್ರೀಯ ಹೆದ್ದಾರಿ 169 ಸಂಪರ್ಕ ಹೊಂದಿರುವ ಪ್ರಮುಖ ವೃತ್ತ. ಸಂಚಾರ ದಟ್ಟಣೆಯ ಸ್ಥಿತಿ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಅಂಡರ್‌ಪಾಸ್ ನಿರ್ಮಾಣ ಪ್ರಸ್ತಾವನೆ ಹಲವು ವರ್ಷಗಳ ಹಿಂದೆ ಸಿದ್ದಪಡಿಸಿತ್ತು. ಪಾದುವ ಶಾಲೆಯ ಬಳಿಯಿಂದ ತಾರೆತೋಟ ಬಳಿಯ ಸಂದೇಶ ಲಲಿತಾ ಕಲಾ ವಿದ್ಯಾಲಯದ ಸಮೀಪ ದವರೆಗೆ ಅಂಡರ್‌ಪಾಸ್ ನಿರ್ಮಾಣಕ್ಕೆ ನಿರ್ಧರಿಸಲಾಯಿತು. ಆದರೆ, ಬಳಿಕ ಇದ ರಲ್ಲಿ ಕೆಲವು ಬದಲಾವಣೆಗಳಾಗಿ ಕೊನೆಗೆ ಫ್ಲೈಓವರ್ ಪ್ರಸ್ತಾವನೆ ರೂಪಿಸಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ಸಚಿವ ನಿತಿನ್ ಗಡ್ಕರಿ ಅವರು ಶಿಲಾನ್ಯಾಸ ನಡೆಸಿರುವ ಹಿನ್ನೆಲೆಯಲ್ಲಿ ಕೆಲವೇ ದಿನದಲ್ಲಿ ಇಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಅಂದಾಜು 34.60 ಕೋ.ರೂ. ವೆಚ್ಚದಲ್ಲಿ ಈ ಯೋಜನೆ ನಗರ ವ್ಯಾಪ್ತಿಯಲ್ಲಿ ಜಾರಿಯಾಗಲಿದೆ. ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಿರುವ ಕಾರಣ ಸಂಚಾರ ಸಮಸ್ಯೆ ಎದುರಾಗುತ್ತಿದೆ. ಇಲ್ಲಿ ಹೆದ್ದಾರಿಗೆ ಮಂಗಳೂರು ಏರ್‌ಪೊರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಪರ್ಯಾಯ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ವ್ಯಕ್ತವಾಗಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧರಿಸಿದೆ. ಸ್ಥಳದಲ್ಲೇ ಅನುಮೋದನೆ
ನಂತೂರಿನಲ್ಲಿ ರಾ. ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಯೋಜನೆಗೆ ಸ್ಥಳ ದಲ್ಲಿಯೇ ಅನುಮೋದನೆ ನೀಡ ಲಾಗಿದೆ.-ನಿತಿನ್ ಗಡ್ಕರಿ,
ಕೇಂದ್ರ ಭೂಸಾರಿಗೆ- ಹೆದ್ದಾರಿ ಖಾತೆ ಸಚಿವರು