ಮಡಿಕೇರಿ: ನಾಪೋಕ್ಲುವಿನಲ್ಲಿ ಸುರಿದ ಭಾರೀ ಮಳೆಗೆ ಇತ್ತೀಚೆಗೆ ನಿರ್ಮಿಸಿದ ನಾಪೋಕ್ಲು ಪಟ್ಟಣದಿಂದ ಚರಿಯಪರಂಬು ಗ್ರಾಮಕ್ಕೆ ಹೋಗುವ ರಸ್ತೆಯು ಕೊಚ್ಚಿಹೋಗಿದೆ.
Advertisement
ನಾಪೋಕ್ಲುವಿನಲ್ಲಿ ಎರಡು ಇಂಚಿಗೂ ಅಧಿಕ ಮಳೆ ಸುರಿದಿದೆ. ಕಳೆದ ಒಂದು ತಿಂಗಳ ಹಿಂದೆ ಚೆರಿಯ ಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಪ್ಪಚೆಟ್ಟೋಳಂಡ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನೆಲೆಯಲ್ಲಿ ಈ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಮಳೆಯ ರಭಸಕ್ಕೆ ರಸ್ತೆ ಕೊಚ್ಚಿಹೋಗಿದ್ದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಕಳಪೆ ಕಾಮಗಾರಿ ಆರೋಪ ಮಾಡಿದ್ದಾರೆ.