Advertisement

ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

08:14 PM Jan 27, 2021 | sudhir |

ಗಜೇಂದ್ರಗಡ(ಗದಗ): ಭಾರತ -ಪಾಕ್ ಗಡಿಯಲ್ಲಿ ಪಾಕಿಸ್ತಾನ ಹೇಗೆ ನಡೆದುಕೊಳ್ಳುತ್ತಿಯೋ ಅದೇ ರೀತಿಯಲ್ಲಿ ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ನಡೆದುಕೊಳ್ಳುತ್ತಿದೆ. ವಿನಾಕಾರಣ ಕನ್ನಡಿಗರನ್ನು ಕೆಣಕಿದರೆ, ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಗುಡುಗಿದರು.

Advertisement

ಪಟ್ಟಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಕರವೇ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ದ ಅವರು, ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳನ್ನು ರಚಿಸಿ, ಅಖಂಡ ಭಾರತವನ್ನು ಸ್ಥಾಪಿಸಲಾಗಿದೆ. ಆದರೆ, ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆಯೇ ಇಲ್ಲವೆಂದು ಹರಿಹಾಯ್ದರು.

ಬೆಳಗಾವಿ ಗಡಿಯೊಳಗೆ ಎಂಇಎಸ್ ಆದರೆ ಹೊರಗಡೆ ಶಿವಸೇನೆ ಕಿರಿಕ್ ಮಾಡುತ್ತಿದೆ. ಇಂಥ ಪುಂಡಾಟಿಕೆ ಕರ್ನಾಟಕದಲ್ಲಿ ನಡೆಯುವುದಿಲ್ಲ. ಬೆಳಗಾವಿ, ನಿಪ್ಪಾಣಿ, ಕಾರವಾರ ಅಷ್ಟೇ ಅಲ್ಲ, ರಾಜ್ಯದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಸೌಜನ್ಯ ಕೊಲೆ ಪ್ರಕರಣ: ಸಿಬಿಐ ಮರು ತನಿಖೆಗೆ ಹೈಕೋರ್ಟ್‌ ನಕಾರ

Advertisement

Udayavani is now on Telegram. Click here to join our channel and stay updated with the latest news.

Next