Advertisement
ಉತ್ತರ ಪ್ರದೇಶದಲ್ಲಿ ಸುಮಾರು 3 ಸಾವಿರ ಮೆಟ್ರಿಕ್ ಟನ್ ರೇಷ್ಮೆಗೆ ಬೇಡಿಕೆ ಇದೆ. ಸುಮಾರು 18,189 ಕುಟುಂಬಗಳು ರೇಷ್ಮೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆದರೆ ಕೇವಲ 258 ಮೆಟ್ರಿಕ್ ಟನ್ ಕಚ್ಚಾ ರೇಷ್ಮೆ ಮಾತ್ರ ಉತ್ಪಾದಿಸಲಾಗುತ್ತಿದೆ. ಹಾಗಾಗಿ ಕರ್ನಾಟಕದ ಸೇರಿದಂತೆ ಬೇರೆ ರಾಜ್ಯಗಳ ಮೇಲೆ ಬನರಾಸ್ ನೇಕಾರರು ಅವಲಂಭಿತರಾಗಿದ್ದಾರೆ. ವಾರಣಾಸಿಯಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಕರ್ನಾಟಕ ರೇಷ್ಮೆ ಮಂಡಳಿಯ ಮಾರುಕಟ್ಟೆಯನ್ನು ಸ್ಥಾಪಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದರು.
Related Articles
Advertisement
ಕರ್ನಾಟಕದಲ್ಲಿ ಬಳಸುತ್ತಿರುವ ತಂತ್ರಜ್ಞಾನ, ರೈತರಿಗೆ ನೀಡುತ್ತಿರುವ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಹಾಗೂ ರೇಷ್ಮೆಯಿಂದ ಉತ್ಪಾದಿಸಲಾಗುತ್ತಿರುವ ಉಪ ಉತ್ಪನ್ನಗಳ ಬಗ್ಗೆಯೂ ತಿಳಿಸಿಕೊಡಲಾಯಿತು. ಅಲ್ಲದೇ ಉತ್ತರ ಪ್ರದೇಶದಲ್ಲಿ ರೇಷ್ಮೆ ಉತ್ಪಾದನೆ ಹೆಚ್ಚಿಸಲು ಅಗತ್ಯವಿರುವ ತಂತ್ರಜ್ಞಾನ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.
ಇದಲ್ಲದೇ, ಬನರಾಸ್ ಸೀರೆ ನೇಯ್ಗೆಗೆ ಹೆಸರುವಾಸಿ ಆಗಿರುವ ಲಲ್ಲಾಪುರ ಪ್ರದೇಶಕ್ಕೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ನೇಕಾರರ ಜೊತೆ ಮಾತುಕತೆ ನಡೆಸಿದರು. ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪಿಸುತ್ತಿರುವ ಮಾಹಿತಿ ನೀಡಿ, ಕರ್ನಾಟಕದ ರೇಷ್ಮೆಯನ್ನು ಖರೀದಿಸುವಂತೆ ನೇಕಾರರನ್ನು ಮನವೊಲಿಸಿದರು.
ಇದನ್ನೂ ಓದಿ : ಅನಾಥ ಮಗುವಿಗೆ ‘ವೈಷ್ಣವಿ’ಎಂದು ನಾಮಕರಣ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ
ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಜಾಗ ನಿಗದಿ: ಸಚಿವ ಡಾ.ನಾರಾಯಣಗೌಡ
ಬನರಾಸ್ ಸೀರೆ ನೇಯ್ಗೆಗೆ ಸೇರಿದಂತೆ ವಾರಣಾಸಿ ನೇಕಾರರಿಗೆ ಅಗತ್ಯವಿರುವ ಗುಣಮಟ್ಟದ ರೇಷ್ಮೆ ಪೂರೈಸಲು ಕೆಎಸ್‌ಎಂಬಿ ಸಿದ್ದವಿದೆ. ಈ ಬಗ್ಗೆ ಉತ್ತರ ಪ್ರದೇಶದ ಅಧಿಕಾರಿಗಳ ಜೊತೆ ಉತ್ತಮವಾದ ಸಭೆಯಾಗಿದ್ದು, ತಕ್ಷಣವೇ ಮಾರುಕಟ್ಟೆಗೆ ಜಾಗ ಗುರುತಿಸಿದ್ದಾರೆ. ಎಂಒಯು ಸೇರಿದಂತೆ ಎಲ್ಲಾ ಕಾನೂನುನಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ ಅಂತ್ಯದೊಳಗೆ ಕರ್ನಾಟಕ ಮಾರುಕಟ್ಟೆ ಆರಂಭಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಕರ್ನಾಟಕ ರೇಷ್ಮೆಗೆ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಡುವ ನಮ್ಮ ಯೋಚನೆಗೆ ವಾರಣಾಸಿ ಪ್ರವಾಸವೂ ಫಲಪ್ರದವಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವ ಡಾ.ನಾರಾಯಣ ಗೌಡ ಅವರ ನೇತೃತ್ವದ ನಿಯೋಗದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಆಯುಕ್ತ ಪೆದ್ದಪ್ಪಯ್ಯ, ಕೆಎಸ್‌ಎಂಬಿ ಎಂಡಿ ಅನುರಾಧ ಸೇರಿದಂತೆ 9 ಜನರ ಅಧಿಕಾರಿಗಳು ವಾರಣಾಸಿಗೆ ತೆರಳಿದ್ದರು.